Home Political News ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ
Political News

ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ

Share
Share

ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಾಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದು ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಾಸ್ತಾವನೆ ಸಲ್ಲಿಸಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂ ರ್ಣಗೊಳಿಸುವಂತೆ ಸಂಬಂಧಪಟ್ಟ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈಲ್ವೇ ಸಂಪರ್ಕ ವಿಸ್ತರಣೆ ಸಂಬಂಧ ರಾಜ್ಯ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರೊಂದಿಗೂ ಚರ್ಚಿ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು, ತಿರುಪತಿ ನೂತನ ರೈಲು ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು. ಸರ್ಫೆಸಿ ಕಾಯ್ದೆಯಡಿಯಲ್ಲಿ ಕಾಫಿಬೆಳೆಗಾರರ ಸುಸ್ತಿ ಸಾಲಗಾರರ ಬೆಳೆ ಮತ್ತು ಜಮೀನು ಆನ್‌ಲೈನ್ ಮೂಲಕ ಹರಾಜು ಹಾಕಲಾ ಗುತ್ತಿತ್ತು. ಪಾರ್ಲಿಮೆಂಟ್ ಅಧಿವೇಶನದಲ್ಲಿ ಈ ಸಂಬAಧ ಪ್ರಶ್ನಿಸಿದ್ದು, ಸರ್ಫೆಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಅನ್ವಯವಾಗುವುದಿಲ್ಲ ವೆಂದು ಸಂಬಂಧಪಟ್ಟ ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬೆಳೆಗಾರರಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು. 2500 ಕೋಟಿ ರೂ. ಕಾಫಿ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಾರೆ. ಅದರಲ್ಲಿ ಕೆನರಾ ಬ್ಯಾಂಕ್‌ ವೊಂದರಲ್ಲಿಯೇ 1600 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ 817 ಬೆಳೆಗಾರರು ಒನ್ ಟೈಮ್ ಸೆಟ್ಲ ಮೆಂಟ್‌ಗೆ ಅರ್ಹರಿದ್ದು, 142 ಜನ ಬೆಳೆಗಾರರು ಒನ್ ಟೈನ್ ಸೆಟ್ಲಮೆಂಟ್ ಮಾಡಿಕೊಂಡಿದ್ದಾರೆ ಎಂದರು.

ಉಪಗ್ರಹದ ಮೂಲಕ ಬಿಎಸ್‌ಎನ್‌ಎಲ್ ಸಂಪರ್ಕ ನೀಡುವಂತೆ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಜಿಲ್ಲೆಯಲ್ಲಿ ಮೂರು ಎಫ್.ಎಂ. ಸ್ಟೇಷನ್ ಮಂಜೂರಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಾಸಕರನ್ನು ಒಳಗೊಂಡ ಸಭೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರು ತಾಲೂಕಿನ ಬಸವರಹಳ್ಳಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ತೆರಳುತ್ತಿದ್ದ...

Related Articles

ನಿಗಮ ಮಂಡಳಿ ಸ್ಥಾನ ನೀಡಲು ಪರದಾಡುತ್ತಿರುವ ಕಾಂಗ್ರೆಸ್

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಪತ್ತರಗುಟ್ಟುತ್ತಿದೆ.ಶಾಸಕರು ಮತ್ತು ಕಾಂಗ್ರೆಸ್ ದುಡಿದ ಮುಖಂಡರು ಕಣ್ಣ್...

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

“ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ

ಬೀರೂರು (ಚಿಕ್ಕಮಗಳೂರು): “ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ…”  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ...

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...