Home Latest News ನಕ್ಸಲರು ಶರಣಾಗಲು ನೂತನ ಪ್ಯಾಕೇಜ್ : ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಮಾಹಿತಿ
Latest News

ನಕ್ಸಲರು ಶರಣಾಗಲು ನೂತನ ಪ್ಯಾಕೇಜ್ : ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಮಾಹಿತಿ

Share
Share

ಚಿಕ್ಕಮಗಳೂರು : ರಾಜ್ಯ ಸರ್ಕಾರ 2024ರ ಸಾಲಿನಲ್ಲಿ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ ನೀಡಲಿದೆ. ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಕರೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಕ್ಸಲರ ಶರಣಾಗತಿ ಸಂಬಂಧ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸರಕಾರ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪ್ರಾಮುಖ್ಯತೆ ನೀಡಿದೆ. ಜಿಲ್ಲೆಯಲ್ಲಿ ಈ ಹಿಂದೆಯೂ ನಕ್ಸಲರು ಶರಣಾಗತರಾಗಿದ್ದಾರೆ. ಎಂದ ಅವರು ಕರ್ನಾಟಕ ಸೇರಿ ಹೊರ ರಾಜ್ಯದ ನಕ್ಸಲರಿಗೂ ಶರಣಾಗತಿಗೆ ಅವಕಾಶ ನೀಡಲಾಗಿದೆ ಎಂದರು. ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮೂರು ವರ್ಗಗಳನ್ನು ಮಾಡಲಾಗಿದೆ. ಕರ್ನಾಟಕದವರಾಗಿದ್ದು, ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರೆ 7ಲಕ್ಷ ಪರಿಹಾರಧನವನ್ನು ಮೂರು ಹಂತದಲ್ಲಿ ನೀಡಲಾಗುವುದು. ಹೊರ ರಾಜ್ಯದವರಾಗಿದ್ದು, ಸಕ್ರಿಯವಾಗಿದ್ದರೆ ಅವರಿಗೆ 5ಲಕ್ಷ ಹಣವನ್ನು ಮೂರು ಹಂತಗಳಲ್ಲಿ ನೀಡಲಾಗುವುದು.

ನಕ್ಸಲ್ ಬೆಂಬಲಿತರ ಶರಣಾಗತಿಗೆ 2ಲಕ್ಷ ರೂ. ಘೋಷಣೆ ಮಾಡಲಾಗಿದ್ದು, ಮೂರು ಹಂತದಲ್ಲಿ ಪರಿಹಾರ ಹಣವನ್ನು ನೀಡಲಾಗುವುದು ಎಂದರು. ಶರಣಾಗತಿಯಾಗುವ ನಕ್ಸಲರು ತಮ್ಮನ್ನು ನೆರವಾಗಿ ಸಂಪರ್ಕ ಮಾಡಬಹುದು. ಅವರಿಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ನಕ್ಸಲರನ್ನು ಶರಣಾಗತಿ ಮಾಡಿಸುವವರಿಗೂ ಪೊಲೀಸ್ ಇಲಾಖೆ ಬೆಂಬಲ ನೀಡುತ್ತದೆ ಎಂದ ಅವರು, ಮಾಜಿ ನಕ್ಸಲರ ಸಮಸ್ಯೆ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಭೆ ಮಾಡುತ್ತೇವೆ. ಶರಣಾಗತರಾಗಿರುವ ಮಾಜಿ ನಕ್ಸಲರು ತಮ್ಮ ಸಮಸ್ಯೆಗಳನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ

ಕಡೂರು: ಕುಟುಂಬ ಕಲಹ ಹಾಗೂ ಕ್ಷುಲ್ಲಕ ಜಿದ್ದಾಜಿದ್ದಿ ಅಂತಿಮವಾಗಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಸಮೀಪದ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ಕೇವಲ ಎರಡು...

Related Articles

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...