Home Crime News ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ
Crime News

ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ

Share
Share

ಚಿಕ್ಕಮಗಳೂರು : ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

ಮರ್ಕಲ್ ಗ್ರಾಮದ ನರೇಂದ್ರ ಗೌಡ ತಮ್ಮ ಹಸುವನ್ನು ಅವರದ್ದೇ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅದರ ಅರ್ಧ ದೇಹವನ್ನು ತಿಂದು ಹಾಕಿದೆ ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು ಕರುವಿನ ಆಕ್ರಂದನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್ ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.‌

ಮರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಚಿರತೆ ಆನೆಗಳ ಹಾವಳಿ ಹೆಚ್ಚಿದ್ದು ರಾತ್ರಿ ವೇಳೆಯಲ್ಲಿ ಜಾನುವಾರುಗಳ ಮೇಲೆ ಎರಗಿ ಭಕ್ಷಿಸುವ ಪ್ರಕರಣಗಳು ಹೆಚ್ಚುತ್ತಿದ್ದು ಜನತೆಯ ಭೀತಿ ಮತ್ತಷ್ಟು ಹೆಚ್ಚ ತೊಡಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ ಗಳು ಹಾಗೂ ಫೈನಾನ್ಸ್ ಕಂಪನಿಗಳು ಗ್ರಾಹಕರ ಮೇಲೆ ನಡೆಸುತ್ತಿರುವ...

ಜನವಸತಿ ಪ್ರದೇಶದಲ್ಲೂ ಕಾಡಾನೆಗಳ ಉಪಟಳ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭೀತಿಯಲ್ಲಿ ದಿನದೂಡುವಂತಾಗಿದೆ. ಈವರೆಗೆ ಕೃಷಿ ಜಮೀನುಗಳಿಗೆ ಮಾತ್ರ...

ದ್ವಿಚಕ್ರ ವಾಹನ-ಕ್ರೈನ್ ನಡುವೆ ಅಪಘಾತ: ವ್ಯಕ್ತಿ ಸಾವು

ಅಜ್ಜಂಪುರ : ದ್ವಿಚಕ್ರ ವಾಹನ ಹಾಗೂ ಕ್ರೈನ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ...