Home namma chikmagalur Fire breaks:ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಬಳಿಯ ಅರಣ್ಯದಲ್ಲಿ ಬೆಂಕಿ
namma chikmagalur

Fire breaks:ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಬಳಿಯ ಅರಣ್ಯದಲ್ಲಿ ಬೆಂಕಿ

Share
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಬೆಂಕಿ
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಬೆಂಕಿ
Share

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನೂರಾರು ಎಕರೆ ಪ್ರದೇಶಕ್ಕೆ ಆವರಿಸಿದೆ.

ರಸ್ತೆ ಬದಿಯಲ್ಲಿ ಹೊತ್ತಿಕೊಂಡ ಕಿಡಿ ಇಡೀ ಗುಡ್ಡಕ್ಕೆ ಹರಡಿದೆ. ಅಗ್ನಿಶಾಮಕ ಸಿಬ್ಬಂದಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿದ್ದನ್ನು ನಂದಿಸಲು ಪರದಾಡಿದರು. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದರು.

ಈ ಭಾಗದಲ್ಲಿ ಆನೆ, ಕಡವೆ, ಮಂಗ, ನವಿಲು, ಕಾಡು ಹಂದಿ, ಕಾಡುಕೋಣಗಳು, ಚಿರತೆ ಹೆಚ್ಚಿನ ಸಂಖ್ಯೆಯಲ್ಲಿವೆ. ವಿಶೇಷ ಕೀಟ ಪ್ರಬೇಧ, ಪಕ್ಷಿಗಳು, ಸಸ್ಯ ಸಂಪತ್ತು ಈ ಭಾಗದಲ್ಲಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಪರದಾಡಿದರು.

ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹರಸಾಹಸ ನಡೆಸಿ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಿದ್ದರು.

Fire breaks out in forest near Annappa Swamy temple in Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ...

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ. ನಗರದ ಪುನೀತ್‌...

Related Articles

ಖಂಡ್ರೆ ಸಭೆಯಿಂದ ಕಾಡು ಪ್ರಾಣಿಗಳ “ಅನಾಹುತ” ನಿಲ್ಲಿಸಲು ಸಾಧ್ಯವೇ ?

ಅರಣ್ಯ ಸಚಿವ ಖಂಡ್ರೆ(ಕಂಡರೆ) ಆನೆ,ಹುಲಿ.ಸಿಂಹ,ಇಲಿ,ಪಲ್ಲಿಗಳು ನಡುಗುತ್ತವೆ ಎಂಬ ಭ್ರಮೆ ಯಲ್ಲಿ ಬಾಳೆ ಹೊನ್ನೂರಲ್ಲಿ ರೈತರು,ಬೆಳೆಗಾರರು ಮತ್ತು...

ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ

ಮೂಡಿಗೆರೆ: ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣದ ಆರೋಪಿಗೆ ಚಿಕ್ಕಮಗಳೂರಿನ ಜಿಲ್ಲಾ ಮತ್ತು...

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ. ದುಬೈ ವಿಮಾನ ನಿಲ್ದಾಣದಿಂದ...

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ...