ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಣಿಗೆಬೈಲು ಗ್ರಾಮದ ಅರೇಕಾ ಗ್ರೀವ್ಸ್ ಎಸ್ಟೇಟ್ ನಲ್ಲಿ ನಡೆದಿದೆ.
ವಿನೋದಾ (55) ಕಾಡಾನೆ ದಾಳಿಗೆ ಸಾವನ್ನಪ್ಪಿದ ಕಾರ್ಮಿಕ ಮಹಿಳೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ವಿನೋದಾ ಅವರ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭದ್ರಾ ಅರಣ್ಯ ವಲಯಕ್ಕೆ ಸೇರಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ತಣಿಗೆಬೈಲು ರೇಂಜ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ರೈತರ ಬೆಳೆಗಳ ಮೇಲೆ ಹಾಗೂ ಮಾನವರ ಮೇಲೆ ದಾಳಿ ನಡೆಸುತ್ತಿದೆ. ಇದರಿಂದ ಪ್ರಾಣ ಹಾನಿ ಹೆಚ್ಚಾಗುತ್ತಿದೆ
Woman worker killed in wild attack
Leave a comment