ಅಜ್ಜಂಪುರ: ಜಾತ್ರೆಗೆ ಹೋಗುವ ಸಂದರ್ಭದಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಯುವಕರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಪ್ರತಾಪ್(೨೮) ಹಾಗೂ ಗೋವಿಂದ(೩೦) ಎಂದು ಗುರುತಿಸಲಾಗಿದೆ. ಕಡೇ ದಿನದ ಜಾತ್ರೆಗೆ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದಿಂದ ಮೃತ ಇಬ್ಬರು ಅತಿ ವೇಗವಾಗಿ ಬೈಕ್ನಲ್ಲಿ ಹೋಗುವ ಸಂದರ್ಭದಲ್ಲಿ ಬೈಕ್ ನಿಯಂತ್ರಣಕ್ಕೆ ಸಿಗದೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದು ಅವಘಡ ನಡೆದಿದೆ.
ಡಿಕ್ಕಿ ಹೊಡೆದ ರಬಸಕ್ಕೆ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two killed as bike hits tree in Ajjampura
Leave a comment