ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ೧೭ ಹಲ್ಲುಗಳನ್ನು ಕಳೆದುಕೊಂಡ ನೋವಿಗೆ ಯುವಕ ಜೀವ ಕಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ನಡಿದಿದೆ.
ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ವಿಪ್ಪೇಶ್ (೧೮) ಎಂಬ ಯುವಕನ ೧೭ ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವನ್ನು ಅನುಭವಿಸುತ್ತಿದ್ದ. ಈ ನೋವಿನಿಂದ ಮನನೊಂದು, ಅವನು ತನ್ನ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವಕ ಕೊಪ್ಪದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ. ದೈಹಿಕ ಹಾಗೂ ಮಾನಸಿಕ ಪೀಡನೆ ಎದುರಿಸುತ್ತಿದ್ದ ಈ ವ್ಯಕ್ತಿ ಯಾವಾಗಲೂ ಆಸ್ಪತ್ರೆಗೆ ಹೋಗಿ ಬರಬೇಕಾಗುತ್ತಿತ್ತು. ನಿರಂತರ ಚಿಕಿತ್ಸೆ ಮತ್ತು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಡುವೆ ಆತ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಇದರಿಂದ ಬೇಸತ್ತು ಜೀವಕ್ಕೆ ಕುತ್ತು ತಂದುಕೊಂಡಿದ್ದಾನೆ
ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಳಿ ಬದುಕಬೇಕಿದ್ದ ಮಗ ಜೀವ ಕಳೆದು ಕೊಂಡಿರುವುದನ್ನು ನೋಡಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Young man who lost 17 teeth commits suicide
Leave a comment