Home ಕುರುಬರಹಳ್ಳಿಯಲ್ಲಿ ಹೊಲದಲ್ಲಿ ಸಿಡಿಲು ಬಡಿದು ವೃದ್ಧೆ ಸಾವು
HomeCrime NewsLatest Newsnamma chikmagalur

ಕುರುಬರಹಳ್ಳಿಯಲ್ಲಿ ಹೊಲದಲ್ಲಿ ಸಿಡಿಲು ಬಡಿದು ವೃದ್ಧೆ ಸಾವು

Share
Share

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಹಾಮಳೆಗೆ ಮೊದಲ ಬಲಿಯಾಗಿದೆ. ತಾಲೂಕಿನ ಕುರುಬರಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಮೃತ ವೃದ್ಧೆಯನ್ನು ನಾಗಮ್ಮ (65) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ, ತಮ್ಮ ಮಗಳ ಮನೆಗೆ ಶುಂಠಿ ಬಿತ್ತನೆಗೆ ಬಂದಿದ್ದರು. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಂದು (ಮಾ.23) ಬೆಳಗ್ಗೆ ಅತ್ತೆ-ಮಾವನನ್ನು ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದರು. ಇನ್ನೂ ಹೊಲದಲ್ಲಿ ಒಟ್ಟು 12 ಜನ ಕೆಲಸ ಮಾಡುತ್ತಿದ್ದರು. ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Elderly woman dies after being struck by lightning in a field in Kurubarahalli

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...