Home ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ
HomechikamagalurLatest Newsnamma chikmagalur

ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ

Share
Share

ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದಿಂದ (ಕೆಆರ್‌ಇಡಿಎಲ್‍) ₹25 ಲಕ್ಷ ಅನುದಾನ ನೀಡಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ ಹೇಳಿದರು.

ರಂಭಾಪುರಿ ಪೀಠದಲ್ಲಿ ವೀರಸೋಮೇಶ್ವರ ಸ್ವಾಮೀಜಿಗೆ ಚೆಕ್ ಹಸ್ತಾಂತರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಂಭಾಪುರಿ ಪೀಠಕ್ಕೆ ದೇಶದ ವಿವಿಧೆಡೆಯಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳ ಅಗತ್ಯ ಹೆಚ್ಚಿದ್ದು, ಕಾಮಗಾರಿ ನಡೆಸಲು ಅನುಕೂಲವಾಗಲಿದೆ ಎಂದರು. ರಂಭಾ ಪುರಿ ಪೀಠಕ್ಕೆ ತೆರಳುವ ರಸ್ತೆ ಅಭಿವೃದ್ಧಿ, ರೇಣುಕಾಚಾರ್ಯರ 51 ಅಡಿ ಎತ್ತರದ ವಿಗ್ರಹ ನಿರ್ಮಾಣದ ಸ್ಥಳ ಅಭಿವೃದ್ಧಿ, ಸಮುದಾಯ ಭವನ ಅಭಿವೃದ್ಧಿ ಮಾಡಲಾಗುವುದು ಎಂದರು.

ಮುಂಗಾರು ಪೂರ್ವಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕೈದು ವರ್ಷಗಳಲ್ಲಿ ಈ ಭಾಗದಲ್ಲಿ ಮಳೆಯಿಂದ ಹಾನಿಯಾದ ಬಗ್ಗೆ ಗಮನದಲ್ಲಿದೆ.  ಕೇತ್ರದಲ್ಲಿ ಉಂಟಾದ ಭೂ ಕುಸಿತ, ಸೇತುವೆ, ರಸ್ತೆ, ಮನೆ, ಜೀವ ಹಾನಿ ಬಗ್ಗೆ ಮಾಹಿತಿ ಇದೆ. ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಶೀಘ್ರದಲ್ಲೇ ನಡೆಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್. ಜಯಪ್ರಕಾಶ್, ಬಿ.ಕಣಬೂರು ಗಾಮ ಪಂಚಾಯಿತಿ ಅಧ್ಯಕ್ಷ ರವಿಚಂದ್ರ, ಸದಸ್ಯರಾದ ಎಂ.ಜೆ. ಮಹೇಶ್ ಆಚಾರ್ಯ, ಬಿ.ಸಿ. ಸಂತೋಷ್‍ ಕುಮಾರ್, ಇಬ್ರಾಹಿಂ ಶಾಫಿ, ಪಿಎಸಿಎಸ್ ನಿರ್ದೇಶಕ ಕೆ.ಕೆ. ಗೌತಮ್, ಕ್ರೀಡಾಪಟು ಒ.ಡಿ. ಸ್ಟೀಫನ್, ಶಿವಶಂಕರ್, ಕೆ.ಟಿ. ಗೋವಿಂದೇಗೌಡ, ಸುಧಾಕರ್, ಪ್ರಭಾಕರ್ ಶೆಟ್ಟಿ, ವಿನುತ್ ಭಾಗವಹಿಸಿದ್ದರು.

Rs 25 lakh grant for various development works at Rambhapuri Peetha

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...