ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಇಲಾಖೆಗಳ ಹಾಸ್ಟೆಲ್ ಹಾಗೂ ವಸತಿ ಶಾಲೆಯ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸರ್ಕಾರದ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಳೆದ ೧೫ ರಿಂದ ೨೦ ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು ಸ್ವಚ್ಚತಾಗಾರರು ಕಾವಲುಗಾರರು. ಅತಿಥಿ ಶಿಕ್ಷಕರು, ಕಂಪ್ಯೂಟರ್ ಆಪರೇಟರ್, ಸ್ಟಾಪ್ ನರ್ಸ್‌ಗಳು ಸಂಕಷ್ಟದಲ್ಲಿದ್ದಾರೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಸುಮಾರು ೧೫ ವರ್ಷಗಳಿಂದ ನಾನಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರ ಮಾಸಿಕ ಕನಿಷ್ಟ ವೇತನ ರೂ ೨೫.೭೧೪ ಗಳಿಗೆ ಪರಿಷ್ಕರಣೆ ಮಾಡಿ ಕರಡು ಅಧಿಸೂಚನೆ ಹೊರಡಿಸಿದ್ದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.
ವಾರದ ರಜಾ, ೮ ಘಂಟೆಗಳ ವರೆಗಿನ ಕೆಲಸದ ಅವಧಿ, ೫೦ ಮಕ್ಕಳಿಗೆ ೩ ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರೆಸುವುದು, ಅಧಿಕಾರಿಗಳ ಕಿರುಕುಳ ತಪ್ಪಿಸುವುದು ೨೦೧೭ರಿಂದ ಪ್ರಾರಂಭವಾದ ವಸತಿ ಶಾಲೆಗಳಿಗೆ ಹೆಚ್ಚುವರಿ ೫ ಜನ ಸಿಬ್ಬಂದಿಗಳನ್ನು ನೇಮಕ ಮಾಡುವುದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪಸ್ಥಿತಿಯಲ್ಲಿ ಹೊರಗುತ್ತಿಗೆ ನೌಕರರ ಸಭೆ ಮಾಡುವುದು, ವಿವಿಧೋದೇಶ ಸಹಕಾರ ಸಂಘ ಸ್ಥಾಪನೆ ಇನ್ನುಳಿದ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮಲ್ಲಿ ಮನವಿಯಲ್ಲಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಮೂರ್ತಿ,ಸೌಮ್ಯ, ರಾಧಾ,ವಿಮಲಾ,ಸವಿತಾ,ಪೂರ್ಣೀಮಾ,ಪವಿತ್ರ ಸೇರಿದಂತೆ ಹಲವರಿದ್ದರು.
Leave a comment