ಚಿಕ್ಕಮಗಳೂರು: ಈಗಾಗಲೇ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಗಳಿಗೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಇಂದು ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು.
ಶನಿವಾರ ಬೆಳಿಗ್ಗೆ ಚಿಕ್ಕಮಗಳೂರು ನಗರದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ ನೂರಕ್ಕೂ ಹೆಚ್ಚು ನಿವೃತ್ತಿಹೊಂದಿರುವ ಅಂಗನವಾಡಿ ನೌಕರರು ತಮ್ಮ ಇಳಿ ವಯಸ್ಸಿನಲ್ಲಿ ಜೀವನ ನಿರ್ವಹಿಸಲು ಅನುಕೂಲ ವಾಗುವಂತೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಆಗ್ರಹಿಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈಗಾಗಲೇ ರಾಜ್ಯ ಸರ್ಕಾರ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿಯನ್ನು ಜಾರಿಗೊಳಿಸಿದ್ದು, ೨೦೨೩ನೇ ಸಾಲಿನಿಂದ ನಿವೃತ್ತರಾದವರಿಗೆ ಮಾತ್ರ ಅನ್ವಯಿಸಿ ಆದೇಶಿಸಿದೆ. ಆದರೆ ಸೇವೆಗೆ ಸೇರಿ ೨೦೧೧- ೧೨ ರಿಂದ ನಿವೃತ್ತಿಗೊಂಡ ನೌಕರರನ್ನು ಗ್ರಾಚ್ಯುಟಿ ವ್ಯಾಪ್ತಿಗೆ ಒಳಪಡಿಸದೆ ಇರುವುದರಿಂದ ವಯೋವೃದ್ಧರ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಆದುದರಿಂದ ರಾಜ್ಯ ಸರ್ಕಾರ ಕೂಡಲೇ ಅಂಗನವಾಡಿ ಸೇವೆಗೆ ಸೇರಿ ನಿವೃತ್ತರಾಗಿರುವ ಎಲ್ಲರಿಗೂ ಗ್ರಾಚ್ಯುಟಿಯನ್ನು ಬಿಡುಗಡೆ ಮಾಡಬೇಕೆಂದು ಕೋರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಜದ್ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡಿಸ್ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಮಗಳೂರಿನ ಶೈಲಾ ಬಸವರಾಜು, ಕಡೂರಿನ ಯು. ಆರ್. ಪಾರ್ವತಮ್ಮ, ಮೂಡಿಗೆರೆ ಶೈಲಾ ನಾರಾಯಣಗೌಡ, ತರೀಕೆರೆಯ ಸವಿತಾ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್. ಎಲ್. ರಾಧಾ ಸುಂದರೇಶ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಸಿ. ಧರ್ಮರಾಜು ಹಾಗೂ ಜಿ. ರಮೇಶ್ ಇದ್ದg ಇದ್ದರು
Protest demanding gratuity benefits for retired Anganwadi workers
Leave a comment