Home namma chikmagalur ಹೆಚ್ಚು ಮಳೆ ಸಂಭಾವ್ಯ ಹಿನ್ನೆಲೆ: ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಸೂಚನೆ
namma chikmagalurchikamagalurHomeLatest News

ಹೆಚ್ಚು ಮಳೆ ಸಂಭಾವ್ಯ ಹಿನ್ನೆಲೆ: ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಸೂಚನೆ

Share
Share

ಚಿಕ್ಕಮಗಳೂರು:  ೨೦೨೫ನೇ ಸಾಲಿನ ಮುಂಗಾರು ಪೂರ್ವ ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮಳೆಯಾಗುವ ಸಂದರ್ಭವಿರುವುದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ೨೪ಘಿ೭ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕೇಸ್ವನ್ ಕೇಂದ್ರದಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಹವಾಮಾನ ವೈಪರೀತ್ಯದ ಮಾಹಿತಿಗಳನ್ನು ಆಗಿಂದಾಗ್ಗೆ ಪಡೆದು ಹೆಚ್ಚಿನ ಅನಾಹುತವಾಗದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದ ಜಿಲ್ಲಾಧಿಕಾರಿಗಳು, ತಾಲ್ಲೂಕು ಕೇಂದ್ರಗಳಲ್ಲಿರುವ ಕಂಟ್ರೋಲ್ ರೂಂಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು ಸೇರಿದಂತೆ ಹೋಂ ಗಾರ್ಡ್ಸ್, ಸ್ವಯಂ ಸೇವಕರು, ಈಜುಗಾರರು ಸದಾ ಸನ್ನದ್ಧರಾಗಿರಬೇಕು. ಹೆಚ್ಚು ಮಳೆ ಬೀಳುವ ಸಂದರ್ಭ ಗುಡ್ಡ ಹಾಗೂ ಮಣ್ಣು ಕುಸಿತ ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.

ಅರಣ್ಯ, ಮೆಸ್ಕಾಂ, ಪೊಲೀಸ್, ಅಗ್ನಿಶಾಮಕ ಇಲಾಖೆಗಳು ರಕ್ಷಣಾ ಕಾರ್ಯಕ್ಕೆ ಸದಾ ಸನ್ನದ್ಧವಾಗಿರಬೇಕು ಹಾಗೂ ಲಭ್ಯವಿರುವ ಸಲಕರಣೆಗಳನ್ನು ಸಮರ್ಪಕವಾಗಿ ಇರಿಸಿಕೊಳ್ಳಬೇಕು. ಹಿಂದಿನ ಘಟನೆಗಳ ಆಧಾರದ ಮೇಲೆ ದುರ್ಘಟನೆ ಸಂಭಾವ್ಯ ಪ್ರದೇಶಗಳನ್ನು ಗುರುತಿಸಿ ಕಾರ್ಯ ನಿರ್ವಹಿಸಬೇಕು. ಹಾನಿಯಾಗುವ ಪ್ರದೇಶಗಳಿಗೆ ಸಂಬಂಧಿಸಿದ ತಕ್ಷಣ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳವಂತಿರಬೇಕು. ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ತಹಸೀಲ್ದಾರ್ ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳ ತಂಡ ಕಾರ್ಯೋನ್ಮುಖವಾಗಬೇಕು ಎಂದರು.

ಆಯಾ ತಾಲ್ಲೂಕು ಕೇಂದ್ರಗಳಲ್ಲಿರುವ ಜೆಸಿಬಿ, ಹಿಟಾಚಿ, ಟಿಪ್ಪರ್, ಟ್ರ್ಯಾಕ್ಟರ್‌ಗಳ ಮಾಹಿತಿ ತಿಳಿದುಕೊಂಡಿರಬೇಕು ಹಾಗೂ ಸರ್ಕಾರಿ ವಾಹನಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರುಗಳು ಹೆಚ್ಚು ಹೆಚ್ಚು ಸಭೆಗಳನ್ನು ನಡೆಸಿ ಯಾವುದೇ ಅನಾಹುತಗಳು ಹಾಗೂ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಸ್ತೆ ಬದಿಯಲ್ಲಿರುವ ಮರ, ಗಿಡ, ನೀರು ಹರಿಯುವ ಚಾನಲ್‌ಗಳು ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರು ಮತ್ತು ಚರಂಡಿ ವ್ಯವಸ್ಥೆ ಬಗ್ಗೆ ಗಮನ ಹರಿಸಬೇಕು, ಚರಂಡಿಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು.

ವಿದ್ಯುತ್ ಕಂಬಗಳ ಸ್ಥಿತಿಗತಿ ಗಮನಿಸಬೇಕು, ಔಷಧಿ ದಾಸ್ತಾನು, ಜಾನುವಾರುಗಳ ಔಷಧಿ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು. ಹಳೆಯ ಮನೆಗಳ ವಸ್ತುಸ್ಥಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡಗಳು, ಸರ್ಕಾರಿ ಕಚೇರಿ ಕಟ್ಟಡಗಳ ಸ್ಥಿತಿಗತಿಗಳನ್ನು ಪರೀಕ್ಷಿಸಿಕೊಳ್ಳಬೇಕು. ಯಾವುದೇ ಅಧಿಕಾರಿಗಳು ತಮ್ಮ ದೂರವಾಣಿ ಸಂಪರ್ಕಗಳನ್ನು ಸದಾ ಚಾಲನೆಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾ,ಪಂ.ಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಸುಪಾಸುಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಲು ಎಲ್ಲಾ ಪಿ.ಡಿ.ಒ.ಗಳು ಪರಿಶೀಲಿಸಬೇಕು. ಕುಡಿಯುವ ನೀರಿನ ಪರಿಶುದ್ಧತೆ ಬಗ್ಗೆ ಪರಿಶೀಲನೆ ನಡೆಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಅಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಸ್ಥಳೀಯವಾಗಿ ಆದ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಮೇಲಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಔದಾಸೀನ್ಯ ತೋರದೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕನಕರಡ್ಡಿ ನಾರಾಯಣ ರಡ್ಡಿ, ಉಪವಿಭಾಗಾಧಿಕಾರಿ ದೇವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ತಹಸೀಲ್ದಾರರುಗಳು ಸೇರಿದಂತೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

Heavy rain likely: Officials advised not to leave central location

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...