Home namma chikmagalur ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ
namma chikmagalurchikamagalurCrime NewsHomeLatest News

ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ

Share
Share

ಬೆಂಗಳೂರು: ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ.

ತಮಿಳುನಾಡು ಮೂಲದ ಶಿವು ಕುಟುಂಬ ಹಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದು ನೆಲೆಸಿತ್ತು. ಮೊದಲು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆತ, ತರುವಾಯ ಸುಲಭವಾಗಿ ಹಣ ಸಂಪಾದನೆಗೆ ಅಡ್ಡದಾರಿ ಹಿಡಿದಿದ್ದಾನೆ. ಮನೆಗಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಶಿವು ವಿರುದ್ಧ ನಗರದ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಆನೇಕಲ್ ಹಾಗೂ ಜಿಗಣಿ ಸೇರಿದಂತೆ ಇತರೆ ಠಾಣೆಗಳಲ್ಲಿ 10ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ಮನೆಗಳ್ಳತನಕ್ಕೆ ಕುಖ್ಯಾತನಾಗಿದ್ದ ಆತ, ತಾನು ಕಳ್ಳತನದಲ್ಲಿ ಸಂಪಾದಿಸಿದ್ದ ಹಣದಲ್ಲಿ ಸ್ಪಲ್ಪ ಹಣವನ್ನು ಜನರಿಗೆ ದಾನ ಮಾಡಿ ಕೊಡುಗೈ ದಾನಿ ಹಾಗೂ ರಾಬಿನ್‌ಹುಡ್‌ ಎಂದೆಲ್ಲ ಕರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.
Money earned by robbing houses was used to pay for the education of 20 children
Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ವಿದ್ಯುತ್ ದೀಪಗಳಿಗೆ ಚಾಲನೆ

ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು. ಅವರು ೧೫ನೇ ಹಣಕಾಸು...

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

Related Articles

ಡಿ.ಡಿ.ಪಿ.ಐ.ಕಡ್ಡಾಯ ರಜೆ ಏಕೆ ಇಲ್ಲ ? ಒತ್ತಡಕ್ಕೆ ಮಣಿದರಾ ವ್ಯವಹಾರವೋ ?

ಸರ್ಕಾರಿ ಆದೇಶಕ್ಕೆ ಬೆಲೆ ಇಲ್ಲವೇ….? ಚಿಕ್ಕಮಗಳೂರು: ಜಿಲ್ಲಾ ಶಿಕ್ಷಣ ಅಧಿಕಾರಿ ಜಿ.ಕೆ.ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...