Home ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸಮಸ್ಯೆಗಳ ಅಧ್ಯಯನ
HomechikamagalurLatest Newsnamma chikmagalur

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸಮಸ್ಯೆಗಳ ಅಧ್ಯಯನ

Share
Share

ಚಿಕ್ಕಮಗಳೂರು: ಜಿಲ್ಲೆಯ ಹಲವು ಕಡೆಗಳ ಅಂಗನವಾಡಿ ಕೇಂದ್ರಗಳು, ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದು, ನಾಳೆ (ಮೇ ೨೨) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅವರು ತಿಳಿಸಿದರು.

ನಗರದ ತಮಿಳು ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಬೀದಿಬದಿ ವ್ಯಾಪಾರಿಗಳ ಸ್ಥಿತಿಯ ಬಗ್ಗೆ ಪರಿಶೀಲಿಸಿದ್ದಲ್ಲದೆ, ಅಲ್ಪಸಂಖ್ಯಾತರಿಗೆ ಸೇರಿದ ಸಂಘ-ಸಂಸ್ಥೆಗಳು, ಚರ್ಚ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅವಲೋಕಿಸಿ ವಿಚಾರಣೆ ನಡೆಸಿದ್ದು, ಈ ಭೇಟಿಯ ಸಂದರ್ಭದಲ್ಲಿ ಅಂತಹ ಗಂಭೀರವಾದ ಸಮಸ್ಯೆಗಳೇನೂ ಕಂಡು ಬಂದಿಲ್ಲ.

ಅನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಅಹವಾಲು ಆಲಿಸಿದ್ದು, ನಾಳೆ ನಡೆಯುವ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಈ ಎಲ್ಲಾ ವಿಚಾರಗಳ ಕುರಿತು ಚರ್ಚಿಸುತ್ತಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಮೊಹಮ್ಮದ್ ಶಾಹಿದ್ ರಝ್ವಿ, ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಆಯೋಗದ ಸದಸ್ಯ, ನಿವೃತ್ತ ಐಎಎಸ್ ಅಧಿಕಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

೨೨ಸಿಕೆಎಂ೨: ನಗರದ ಕೊಳಚೆ ಪ್ರದೇಶಕ್ಕೆ ಇಂದು ಭೇಟಿ ನೀಡಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು.

Study of issues by the Chairman of the Minorities Commission

Share

Leave a comment

Leave a Reply

Your email address will not be published. Required fields are marked *

Don't Miss

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಇದಕ್ಕೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ನಿಖಿಲ್ ಕುಮಾರಸ್ವಾಮಿ...

ಬನ್ನೂರು ಬಳಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ಯುವತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಅನಿತಾ (25) ಸಾವನ್ನಪ್ಪಿದ...

Related Articles

ಹಕ್ಕುಪತ್ರಕ್ಕಾಗಿ ಸಿ.ಟಿ.ರವಿ ಪ್ರತಿಭಟನೆ ಹಾಸ್ಯಾಸ್ಪದ

ಚಿಕ್ಕಮಗಳೂರು: : ಕಳೆದ ೧೯ ವರ್ಷದಲ್ಲಿ ಆಡಳಿತದಲ್ಲಿದ್ದಾಗ ಬಡವರಿಗೆ ನಿವೇಶನ, ಮನೆಯ ಹಕ್ಕುಪತ್ರ ನೀಡದ ಮಾಜಿ...

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ

ಚಿಕ್ಕಮಗಳೂರು: ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ...

ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಜಿಲ್ಲಾ ಬೆಳೆಗಾರರ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯಸರ್ಕಾರ ತೋಟಗಾರಿಕೆ, ಕೃಷಿ ಮತ್ತು ಕಾಫಿಮಂಡಳಿ ಅಧಿಕಾರಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ಆಯಾ ತಾಲ್ಲೂಕು...

ಅಯ್ಯನಕೆರೆಯಲ್ಲಿ ತೂಬು – ಕೆರೆ ದುರಸ್ತಿಗೆ ಐದು ಕೋಟಿ ಹಣ

ಚಿಕ್ಕಮಗಳೂರು: ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣವನ್ನು...