Home ರೈತರ ನೋಂದಣಿಗೆ ಕೃಷಿ ಇಲಾಖೆ ಮೊಬೈಲ್ ಆಪ್ ಬಿಡುಗಡೆ
HomechikamagalurLatest Newsnamma chikmagalur

ರೈತರ ನೋಂದಣಿಗೆ ಕೃಷಿ ಇಲಾಖೆ ಮೊಬೈಲ್ ಆಪ್ ಬಿಡುಗಡೆ

Share
Share

ಚಿಕ್ಕಮಗಳೂರು: ದೇಸಿ ತಳಿಗಳನ್ನು ಬಳಸಿ ಕೃಷಿ ಮಾಡುತ್ತಿರುವ ರೈತರಿಗೆ ಉತ್ತೇಜನ ನೀಡಲು ಕೃಷಿ ಇಲಾಖೆಯು ಜಿಲ್ಲೆಯಲ್ಲಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರೈತರ ನೋಂದಣಿಗೆ ಮೊಬೈಲ್ ಆಪ್ ಬಿಡುಗಡೆ ಮಾಡಲಾಗಿದೆ.

ಸ್ಥಳೀಯ ತಳಿಗಳು ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ನಿರ್ವಹಿಸಲ್ಪಡುವ ತಳಿಗಳು ದೇಸಿ ತಳಿಗಳೆಂದು ಕರೆಯಲ್ಪಡುತ್ತವೆ. ಇವು ರೈತರ ಸಾಂಪ್ರದಾಯಿಕ ಮತ್ತು ಪರಂಪರೆ ಪ್ರಭೇದಗಳಾಗಿವೆ. ಈ ತಳಿಗಳಲ್ಲಿರುವ ವಿಶಿಷ್ಟ ಗುಣಲಕ್ಷಣಗಳು ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ದವಾಗಿವೆ.

ದೇಸಿ ತಳಿಗಳನ್ನು ಸಂರಕ್ಷಿಸಿ ಮತ್ತು ಬೆಳೆಸುವ ಮೂಲಕ ಕೃಷಿ ಪರಂಪರೆಯನ್ನು ಮುಂದುವರಿಸುತ್ತಿರುವ ರೈತರನ್ನು ಗುರುತಿಸುವುದು ಮತ್ತು ಉತ್ತೇಜಿಸುವುದನ್ನು ಮನಗಂಡು ಕೃಷಿ ಇಲಾಖೆಯು ದೇಸಿ ತಳಿಗಳ ನಿರಂತರ ಕೃಷಿಯನ್ನು ಪ್ರೋತ್ಸಾಹಿಸಲು, ಜೀವ ವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿ ಪೋಷಿಸಲು ಈ ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಕಣ್ಮರೆಯಾಗುತ್ತಿರುವ ತಳಿಗಳನ್ನು ಸಂರಕ್ಷಿಸುವುದರ ಜೊತೆಗೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ ಗುರಿಯನ್ನು ಹೊಂದಲಾಗಿದೆ. ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವ ಜೊತೆಗೆ ದೇಸಿ ತಳಿಗಳ ಜನಪ್ರಿಯತೆಗೆ ಬೆಂಬಲ ನೀಡುವ ಸಂಕಲ್ಪ ಮಾಡಲಾಗಿದೆ.

ಕೃಷಿ ಇಲಾಖೆ ವತಿಯಿಂದ ದೇಸಿ ತಳಿ ಸಂರಕ್ಷಿಸುತ್ತಿರುವ ರೈತರನ್ನು ಗುರುತಿಸಲು ಮತ್ತು ಅಂತಹ ರೈತರ ನೋಂದಣಿಗಾಗಿ ಮೊಬೈಲ್ ಆಪ್ ಬಿಡುಗಡೆ ಮಾಡಿದ್ದು, ಆಸಕ್ತ ರೈತರು ತಮ್ಮ ಸಮೀಪದ ಕೃಷಿ ಇಲಾಖೆ ಕಚೇರಿಗೆ ಮೇ ೩೦ ರೊಳಗೆ ಭೇಟಿ ನೀಡುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Agriculture Department launches mobile app for farmer registration

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...