Home namma chikmagalur ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮೇ.28ರ ವರೆಗೆ ರಜೆ ಘೋಷಣೆ
namma chikmagalurchikamagalurHomeLatest News

ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮೇ.28ರ ವರೆಗೆ ರಜೆ ಘೋಷಣೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಗಾಳಿಯ ಅಬ್ಬರ ಮುಂದುವರೆದಿದ್ದು, ಮಳೆ ಹಿನ್ನೆಲೆ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಮೇ.26 ರಿಂದ ಮೇ.28ರ ವರೆಗೆ ರಜೆ ಘೋಷಣೆ ಮಾಡಲಾಗಿದೆ.

ಅಬ್ಬರದ ಗಾಳಿ ಮಳೆಗೆ ಮೂಡಿಗೆರೆ ತಾಲೂಕು ಬಾಳೂರು ಕಾಫಿ ಎಸ್ಟೇಟ್ ನಲ್ಲಿ ಕಾರ್ಮಿಕರ ಮನೆ ಮೇಲೆ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಸುನಂದ ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳು ಸುನಂದ ಅವರನ್ನು ಬಣಕಲ್ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಮರಬಿದ್ದು ಮನೆಯ ಮೇಲ್ಟಾವಣಿಗೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದ್ದು ತೋಟದ ಮಾಲೀಕ ಹಾಗೂ ವ್ಯವಸ್ಥಾಪಕ ಗಾಯಗೊಂಡ ಸುನಂದ ಅವರನ್ನು ಆಸ್ಪತ್ರೆ ದಾಖಲಿಸುವ ಸೌಜನ್ಯವನ್ನು ತೋರಿಲ್ಲವೆಂದು ಕುಟುಂಬದವರು ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಳೆ, ಗಾಳಿ ಅಬ್ಬರಕ್ಕೆ ಮಲೆನಾಡು ಭಾಗದಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿದ್ದು, ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಸ್ಪೋಟಗೊಂಡಿದೆ. ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಲ್ಲಿ ಸುತ್ತಮುತ್ತ ಮನೆಗಳಲ್ಲಿ ಅವಘಡ ಸಂಭವಿಸಿದೆ.

ಜಿಲ್ಲಾದ್ಯಂತ ಎಡಬಿಡದೆ ನಿರಂತರ ಮಳೆಗೆ ಮಲೆನಾಡು ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳಕೊಳ್ಳ, ಕೆರೆಕಟ್ಟೆಗಳು ತುಂಬಿವೆ. ಜಲಪಾತಗಳು ಸೃಷ್ಟಿಯಾಗಿವೆ. ಜಿಲ್ಲಾಡಳಿತದಿಂದ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರವಾಸಿಗರು ಮತ್ತು ಜನರು ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಗುಡ್ಡ ಕುಸಿತ ಸಂಭವಿತ ಪ್ರದೇಶಗಳ ಮೇಲೆ ನಿಗಾ ವಹಿಸಲಾಗಿದೆ.

Holiday declared for Anganwadi centers in the district till May 28

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...