ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರ ಪ್ರತಿ ನಿತ್ಯ ಜನರಿಗೆ ಸಮಸ್ಯೆ ಸೃಷ್ಟಿಸುತ್ತಿದೆ.
ಇದೀಗ ಮನೆ ಮೇಲೆ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡು ಮನೆಯೊಳಗಿದ್ದ ಮಹಿಳೆಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೈಲಿಮನೆ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ನಂದಿನಿ ಎಂಬುವವರಿಗೆ ಸೊಂಟ ಹಾಗೂ ಬೆನ್ನಿನ ಭಾಗಕ್ಕೆ ತೀವ್ರ ಗಾಯಗಳಾಗಿವೆ. ನಿನ್ನೆ ನಂದಿನಿಯವರ ಅಜ್ಜ ವಯೋಸಹಜವಾಗಿ ಸಾವನ್ನಪ್ಪಿದ್ದರು ಅವರ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬರುತ್ತಿದಂತೆ ಮನೆ ಮೇಲೆ ಮರ ಕುಸಿದು ಬಿದ್ದಿದೆ.
ತಕ್ಷಣ ಎಚ್ಚೆತ್ತ ಸ್ಥಳೀಯರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ನಂದಿನಿ ಯವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಾಸದ ಮನೆ ಸಂಪೂರ್ಣ ಜಖಂಗೊಂಡು ಮನೆಯಲ್ಲಿದ್ದ ವಸ್ತುಗಳು ನಾಶವಾಗಿರುವುದರಿಂದ ಜಿಲ್ಲಾಡಳಿತ ಹಾಗೂ ಮೂಡಿಗೆರೆ ಶಾಸಕರು ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಳೆಯ ತೀವ್ರತೆ ಜಿಲ್ಲೆಯಲ್ಲಿ ದಿನ ದಿನಕ್ಕೂ ಹೆಚ್ಚಾಗುತ್ತಿರುವ ಪರಿಣಾಮ ಜನ ಅವಾಂತರಗಳು ಸೃಷ್ಟಿಯಾಗುತ್ತಿವೆ.
Tree falls on house in Mailimane village
Leave a comment