Home ಪೌರ ನೌಕರರ ಮುಷ್ಕರಕ್ಕೆ ನಗರಸಭಾ ಸದಸ್ಯರುಗಳ ಬೆಂಬಲ
HomechikamagalurLatest Newsnamma chikmagalur

ಪೌರ ನೌಕರರ ಮುಷ್ಕರಕ್ಕೆ ನಗರಸಭಾ ಸದಸ್ಯರುಗಳ ಬೆಂಬಲ

Share
Share

ಚಿಕ್ಕಮಗಳೂರು:  ಪೌರ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರಕ್ಕೆ ಪಕ್ಷಾತೀತವಾಗಿ ನಗರಸಭಾ ಸದಸ್ಯರುಗಳು ಬುಧವಾರ ಬೆಂಬಲ ಸೂಚಿಸಿ ಸರ್ಕಾರಕ್ಕೆ ನೌಕರರ ಬೇಡಿಕೆಗಳನ್ನು ಶೀಘ್ರವೇ ಪೂರೈಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಮಾತನಾಡಿದ ನಗರಸಭಾ ಸದಸ್ಯ ಮುನೀರ್ ಅಹ್ಮದ್ ಪೌರ ನೌಕರರು ಮೂಲಬೇಡಿಕೆ ಗಳನ್ನು ಈಡೇರಿಸುವುದು ಸರ್ಕಾರದ ಆದ್ಯ ಕರ್ತವ್ಯ. ಹೀಗಾಗಿ ಶಾಸಕರು, ಸಚಿವರುಗಳು ಮುಖ್ಯಮಂತ್ರಿಗ ಳೊಂದಿಗೆ ಚರ್ಚಿಸುವ ಮೂಲಕ ಬೇಡಿಕೆ ಪೂರೈಸಲು ಶ್ರಮಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ವಿಪರೀತ ಮಳೆಯಿಂದ ಡೆಂಗ್ಯೂ ಸೇರಿದಂತೆ ಜ್ವರಬಾಧೆ ಹೆಚ್ಚಾಗುವ ಸಂಭವ ವಿದೆ. ಅಲ್ಲದೇ ರಾಜ್ಯದಲ್ಲಿ ಮತ್ತೊಮ್ಮೆ ಕೋವಿಡ್ ಆತಂಕ ಎದುರಾಗುತ್ತಿರುವ ಕಾರಣ ಈ ಸಮಯದಲ್ಲಿ ಪೌರ ನೌಕರರು ಕೆಲಸಕ್ಕೆ ರಜೆಗೊಳಿಸಿ ಪ್ರತಿಭಟನೆಗೆ ಮುಂದಾದರೆ ಆರೋಗ್ಯಪೂರ್ಣ ಸಮಾಜ ಹದಗೆಡ ಲಿದೆ ಎಂದು ಎಚ್ಚರಿಸಿದರು.

ಪ್ರತಿದಿನದ ಪೌರ ನೌಕರರ ಕೆಲಸ-ಕಾರ್ಯಗಳಿಂದ ನಗರ, ಪಟ್ಟಣಗಳು ಆರೋಗ್ಯಪೂರ್ಣವಾಗಿದೆ. ಈ ಸಂದರ್ಭದಲ್ಲಿ ನೌಕರರ ಸಣ್ಣಮಟ್ಟಿನ ಬೇಡಿಕೆಗಳು ಶೀಘ್ರವೇ ಈಡೇರಿಸುವುದು ಸರ್ಕಾರ ಕಾಯಕವಾಗಿ ದೆ. ಆ ನಿಟ್ಟಿನಲ್ಲಿ ಇಂದು ಪಕ್ಷಾತೀತವಾಗಿ ನಗರಸಭಾ ಸದಸ್ಯರುಗಳು ಒಕ್ಕೊರಲಿನಿಂದ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪೌರ ನೌಕರರ ಸಂಘದ ಅಧ್ಯಕ್ಷ ಅಣ್ಣಯ್ಯ, ನಗರಸಭಾ ಉಪಾಧ್ಯಕ್ಷೆ ಅನು ಮಧು ಕರ್, ಸದಸ್ಯರಾದ ಕಾಯಿರವಿ, ಮಂಜುಳಾ, ಇಂದಿರಾ ಶಂಕರ್, ಲಕ್ಷ್ಮಣ್, ಪ್ರಕಾಶ್ ರೈ ಮತ್ತಿತರರು ಹಾಜ ರಿದ್ದರು.

Municipal council members support civic employees’ strike

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...