Home Crime News ಅಜ್ಜಂಪುರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ – ಮೂವರ ಬಂಧನ
Crime NewschikamagalurHomeLatest Newsnamma chikmagalur

ಅಜ್ಜಂಪುರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ – ಮೂವರ ಬಂಧನ

Share
Share

ಚಿಕ್ಕಮಗಳೂರು: ಐಪಿಎಲ್ ಪಂದ್ಯದ ಫೈನಲ್ ಹಿನ್ನಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಅಜ್ಜಂಪುರ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ೩೮ ಸಾವಿರ ನಗದು, ಒಂದು ಪೋರ್ಡ್ ಪಿಗೋ ಕಾರ್ ಹಾಗೂ ೪ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಅಜ್ಜಂಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್‌ಗೆ ಬ್ರೇಕ್ ಹಾಕಲು ಎಸ್ಪಿ ವಿಕ್ರಂಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಮಾರ್ಗದರ್ಶನದಲ್ಲಿ ಅಜ್ಜಂಪುರ ಪೊಲೀಸ್ ಠಾಣೆಯ ಇನ್ಸೆಕ್ಟರ್ ವಿರೇಂದ್ರ ಪಿಎಸ್‌ಐ ತಿಪ್ಪೇಶ್ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಲಾಗಿತ್ತು.

ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಸಾಗರ್, ಗಗನ್ ಎಸ್ ಜಾಧವ್,ಗಗನ್ ಎಸ್ ದೇವಾಂಗ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಆರೋಪಿಗಳಿಂದ ಒಟ್ಟು ೩೮ ಸಾವಿರ ನಗದು ಕೆಎ-೦೩-ಎಂ.ಎಂ.-೭೩೯೫ ನೋಂದಣಿ ಸಂಖ್ಯೆಯ ಪೋರ್ಡ್ ಪಿಗೋ ಕಾರ್ ಹಾಗೂ ೪ ಮೊಬೈಲ್ ಗಳನ್ನು ವಶಕ್ಕೆ ಪಡೆದು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಬ್ಬ ಆರೋಪಿ ಉಡುಪಿಯ ರಾಘವೇಂದ್ರ ಅಲಿಯಾಸ್ ರಾಘು ಶೆಟ್ಟಿ ತಲೆಮರಿಸಿ ಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ

Three arrested in Ajjampura over cricket betting scam

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...