Home Latest News ಚಾರ್ಮಾಡಿ ಘಾಟಿಯಲ್ಲಿ ಕಾನೂನು ಉಲ್ಲಂಘನೆ: 16 ಪ್ರಕರಣ ದಾಖಲು
Latest NewschikamagalurCrime NewsHomenamma chikmagalur

ಚಾರ್ಮಾಡಿ ಘಾಟಿಯಲ್ಲಿ ಕಾನೂನು ಉಲ್ಲಂಘನೆ: 16 ಪ್ರಕರಣ ದಾಖಲು

Share
Share

ಮೂಡಿಗೆರೆ: ಕಾನೂನು ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಗುರುವಾರ 16 ಪ್ರಕರಣಗಳನ್ನು ದಾಖಲಿಸಲಾಗಿದೆ.

ಚಾರ್ಮಾಡಿ ಘಾಟಿಯ ಜಲಪಾತಗಳ ಬಳಿ ಅಪಾಯಕಾರಿ ಸ್ಥಳಗಳಿಗೆ ಪ್ರವಾಸಿಗರು ತೆರಳುತ್ತಿರುವ ವರದಿ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ಬೆನ್ನಲ್ಲೇ ಘಾಟಿಯಲ್ಲಿ ಪೊಲೀಸ್‌ ಗಸ್ತನ್ನು ಹೆಚ್ಚಿಸಲಾಗಿದೆ.

ಬಣಕಲ್ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ರೇಣುಕಾ ನೇತೃತ್ವದಲ್ಲಿ ಇಡೀ ದಿನ ಕಾರ್ಯಚರಣೆ ನಡೆಸಿ, ಕಾನೂನು ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿ 16 ಲಘು ಪ್ರಕರಣಗಳನ್ನು ದಾಖಲಿಸಿ, ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಯಿತು.

ಈ ವೇಳೆ ಮಾತನಾಡಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ರೇಣುಕಾ, ‘ಘಾಟಿಯಲ್ಲಿ ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ, ಸೂಚನಾ ಫಲಕಗಳನ್ನು ಹಾಕಲಾಗಿದೆ. ರಸ್ತೆ ಬದಿ ವಾಹನ ಸವಾರರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲುಗಡೆಗೊಳಿಸದಂತೆ ಸೂಚಿಸಲಾಗಿದೆ. ಕೆಲವು ವಾಹನಗಳನ್ನು ನಿಲುಗಡೆಗೆ ಸೂಕ್ತವಲ್ಲದ ಸ್ಥಳಗಳಲ್ಲಿ ನಿಲುಗಡೆಗೊಳಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ.

ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ಅನಾಹುತ ಸಂಭವಿಸಬಾರದು ಎಂಬುದೇ ಇಲಾಖೆಯ ಉದ್ದೇಶ ವಾಗಿದ್ದು, ಪ್ರಯಾಣಿಕರು ಹಾಗೂ ಪ್ರವಾಸಿಗರು ಕಾನೂನು ಉಲ್ಲಂಘನೆ ಮಾಡದೇ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದರು.

ಪ್ರಕರಣ ದಾಖಲು: ತಾಲ್ಲೂಕಿನ ಬಣಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ದೇವರಮನೆ ಗ್ರಾಮದ ಬಳಿ ನಡುರಸ್ತೆಯಲ್ಲೇ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದ 9 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಬೆಳ್ತಂಗಡಿ ವ್ಯಾಪ್ತಿಯ ಒಂಬತ್ತು ಜನರ ತಂಡವು ದೇವರಮನೆ ಬಳಿ ನಡುರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಕೇಕ್‌ ಕತ್ತರಿಸಿ, ಅಸಭ್ಯವಾಗಿ ವರ್ತಿಸುತ್ತ ಇರುವುದರ ಬಗ್ಗೆ ಬಂದ ದೂರನ್ನು ಆಧರಿಸಿ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Law violation at Charmadi Ghat: 16 cases registered

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...