Home Latest News ಬ್ಯಾಂಕ್ ಸಾಲದ ಕಿರುಕುಳಕ್ಕೆ ಮತ್ತೊಬ್ಬ ರೈತ ಬಲಿ
Latest NewschikamagalurHomenamma chikmagalur

ಬ್ಯಾಂಕ್ ಸಾಲದ ಕಿರುಕುಳಕ್ಕೆ ಮತ್ತೊಬ್ಬ ರೈತ ಬಲಿ

Share
Share

ತರೀಕೆರೆ : ತಾಲ್ಲೂಕಿನ ಹುಣಸಘಟ್ಟ ಗ್ರಾಮದ ಯೂನಿಯನ್ ಬ್ಯಾಂಕ್ನಲ್ಲಿ ಸಾಲ ಪಡೆದಿದ್ದ ಮುದುಗುಂಡಿ ತಾಂಡ್ಯದ ತಿಮ್ಮಾನಾಯ್ಕ್ ಎಂಬುವರು ಗುರುವಾರ ಸಂಜೆ ವಿ? ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.

ಸಾಲದ ಮರು ಪಾವತಿ ವಿಚಾರದಲ್ಲಿ ಮೇ. ೨೮ ರಂದು ಜನರಲ್ ಮ್ಯಾನೇಜರ್ ಮತ್ತು ಬ್ಯಾಂಕ್ ವ್ಯವಸ್ಥಾಪಕರು ಸೇರಿ ಒ ಟಿ ಎಸ್ ಮುಖೇನಾ ಸಾಲ ಮರು ಪಾವತಿಗಾಗಿ ಕರೆದಿದ್ದು, ತಿಮ್ಮಾನಾಯ್ಕ್ ರವರ ಸಾಲದ ಮೊತ್ತ ರೂ. ೧೪ ಲಕ್ಷವಿದ್ದು, ಬಡ್ಡಿ ಇತರೆ ಸೇರಿ ರೂ. ೩೭ ಲಕ್ಷ ಆಗಿದ್ದು ಅದರಲ್ಲಿ ರೂ. ೩೧ ಲಕ್ಷ ಪಾವತಿ ಮಾಡುವಂತೆ ಬ್ಯಾಂಕ್ ನವರು ಒತ್ತಡ ಹೇರಿದ್ದು,

ಸಾಲದ ವಿಚಾರವಾಗಿ ಒಂದು ವ?ದ ಹಿಂದೆ ಡಿ ಆರ್ ಟಿ ಬೆಂಗಳೂರು ಕೋರ್ಟ್ ಗೆ ಧಾವೆ ಹಾಕಿದ್ದು, ಈ ಬಗ್ಗೆ ನಿಮ್ಮ ಜಮೀನನ್ನು ಹರಾಜು ಹಾಕುವುದಾಗಿ ತಿಳಿಸಿದ್ದು, ಈ ವಿಚಾರವಾಗಿ ಮನನೊಂದು ವಿ? ಸೇವಿಸಿದ್ದು, ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ತಿಂಗಳಲ್ಲಿ ಇದೇ ರೀತಿ ಇದೇ ಬ್ಯಾಂಕಿನಿಂದ ಸಾಲ ಪಡೆದ ರೈತ ಹೊಸಹಳ್ಳಿ ತಾಂಡ್ಯದ ರೈತ ಹೆಚ್.ಎಲ್. ಮಂಜ್ಯಾನಾಯ್ಕ್ ರವರು ತಗಾದೆ ನೋಟಿಸ್ ನಿಂದ ಮನನೊಂದು ವಿ? ಸೇವಿಸಿ ಸಾವನ್ನಪ್ಪಿರುವ ಘಟನೆ ಮಾಸುವ?ರಲ್ಲಿ ಮತ್ತೋಂದು ಪ್ರಕರಣ ಮರುಕಳಿಸಿರುವುದು ವಿಪರ್ಯಾಸವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Another farmer falls victim to bank loan harassment

 

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...