Home namma chikmagalur ರೈತರ ಬೃಹತ್ ಸಮಾವೇಶಕ್ಕೆ ಬೆಂಬಲಿಸಿ
namma chikmagalurchikamagalurHomeLatest News

ರೈತರ ಬೃಹತ್ ಸಮಾವೇಶಕ್ಕೆ ಬೆಂಬಲಿಸಿ

Share
Share

ತರೀಕೆರೆ : ಜಿಲ್ಲೆಯಲ್ಲಿ ದಿನದಿನಕ್ಕೆ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘ ಹೆಚ್ಚಾಗುತ್ತಿದ್ದರೆ, ಮತ್ತೋಂದೆಡೆ ರೈತರು ಮತ್ತು ಅರಣ್ಯ ಇಲಾಖೆಯ ಸಂಘದ ಪ್ರಕಟಣಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಇದ್ದನ್ನು ತಪ್ಪಿಸಲು ಮಲೆನಾಡು ಮತ್ತು ಕೆಲ ಬಯಲು ಸೀಮೆಯ ಜನಜೀವನ ಉಳಿಸಿಕೊಳ್ಳಲು ಜೂ. ೯ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ರೈತರ ಬೃಹತ್ ಸಮಾವೇಶಕ್ಕೆ ಪಕ್ಷಾತೀತವಾಗಿ ಬೆಂಬಲಿಸಿ ಯಶಸ್ವಿಗೊಳಿಸಿ ಎಂದು ತರೀಕೆರೆ ತಾಲ್ಲೂಕು ದೇವರಾಜ್ ಅರಸ್ ವಿಚಾರ ವೇದಿಕೆಯ ಉಪಾಧ್ಯಕ್ಷ ಸಿ.ಆರ್. ಬಸವರಾಜ್ ಹೇಳಿದರು.

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡುತ್ತಾ ಈ ಸಮಾವೇಶದಲ್ಲಿ ನಮೂನೆ – ೫೭ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡಬೇಕು. ಡೀಮ್ಡ್ ಫಾರೆಸ್ಟ್ ಪರಿ?ತ ಪಟ್ಟಿ ತಯಾರಿಸುವಾಗ ಗ್ರಾಮ ಪಂಚಾಯಿತಿ ಮೂಲಕ ಪ್ರಚುರ ಪಡಿಸಿ ರೈತರ ಹಾಗೂ ಗ್ರಾಮಸ್ಥರ ಗಮನಕ್ಕೆ ತರಬೇಕು. ಸೆಕ್ಷನ್ ೪(೧) ಪ್ರಸ್ತಾವನೆಯಲ್ಲಿರುವ ಎಲ್ಲಾ ರೈತರ ಜಮೀನು, ಮನೆ, ಗ್ರಾಮ, ಶಾಲಾ-ಕಾಲೇಜು, ಆಟದ ಮೈದಾನ, ಆಸ್ಪತ್ರೆ, ಸ್ಮಶಾನ, ಆಶ್ರಯ ನಿವೇಶನ ಮತ್ತು ಇನ್ನೀತರೆ ಅಭಿವೃದ್ಧಿ ಕೆಲಸಗಳಿಗೆ ಜಾಗ ಮೀಸಲಿಡಬೇಕು ಎಂಬುವುದರ ಜೊತೆಗೆ ಇನ್ನೀತೆ ಹಲವಾರು ಬೇಡಿಕೆಗಳನ್ನು ಈ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ ಎಂದರು.

ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ, ಚಿಕ್ಕಮಗಳೂರು, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರೀಕ ರೈತ ಹಿತರಕ್ಷಣಾ ಸಮಿತಿ, ಶೃಂಗೇರಿ ಕ್ಷೇತ್ರ ಹಾಗೂ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಕನ್ನಡ, ದಲಿತ, ರೈತ ಮತ್ತು ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶದಲ್ಲಿ ಜಿಲ್ಲೆಯ ಸಂಸದ ಮತ್ತು ಎಲ್ಲಾ ಶಾಸಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.‌

Support the massive farmers’ convention

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...