Home Latest News ಕ್ರೈಸ್ ವಸತಿ ಶಾಲೆಯ ಶಿಕ್ಷಕರು ಅಸಹಕಾರ ಚಳುವಳಿ ಆರಂಭ
Latest NewschikamagalurHomenamma chikmagalur

ಕ್ರೈಸ್ ವಸತಿ ಶಾಲೆಯ ಶಿಕ್ಷಕರು ಅಸಹಕಾರ ಚಳುವಳಿ ಆರಂಭ

Share
Share

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೈಸ್ ವಸತಿ ಶಾಲೆಯ ಶಿಕ್ಷಕರು ಅಸಹಕಾರ ಚಳುವಳಿ ಆರಂಭಿಸಿದ್ದೇವೆ ಎಂದು ಕರ್ನಾಟಕ ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎನ್.ದೀಪ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪ್ರಮುಖ ಐದು ಬೇಡಿಕೆಗಳನ್ನು ಸರ್ಕಾರ ಮುಂದಿಟ್ಟು ಅಸಹಕಾರ ಚಳು ವಳಿ ಆರಂಭಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ೧೨ ವರ್ಷಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಂಧಿಸುತ್ತಿಲ್ಲ, ವಸತಿ ಶಾಲೆ ಶಿಕ್ಷಕರನ್ನು ಸರ್ಕಾರಿ ನೌಕರಾಗಿ ಗುರುತಿಸುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಸತಿ ಶಾಲೆಗಳು ಉತ್ತಮ ಫಲಿತಾಂಶವನ್ನು ಪಡೆದುಕೊಂಡಿವೆ. ವಸತಿ ಶಾಲೆಗೆ ತೆರಳುವ ಜನಪ್ರತಿನಿಧಿಗಳು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಆದರೆ, ಉತ್ತಮ ಫಲಿತಾಂಶ ಬರುಲು ಕಾರಣರಾದ ಶಿಕ್ಷಕರನ್ನು ಸರ್ಕಾರಿ ನೌಕರರೆಂದು ಗುರುತಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಣ ಇಲಾಖೆ ಸಚಿವರು ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಾರೆ, ಆದರೆ, ಅಧಿಕಾರಿಗಲು ಬೇಡಿಕೆ ಈಡೇರಿಕೆಗೆ ಮುಂದಾಗುತ್ತಿಲ್ಲ. ವಸತಿ ಶಾಲೆ ಶಿಕ್ಷಕರನ್ನು ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮೇ.೨೬ ರಿಂದ ಮೇ. ೨೮ರ ವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಯದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಲಿಲ್ಲ. ಹಾಗಾಗಿ ಜಿಲ್ಲಾಮಟ್ಟದಲ್ಲಿ ಮೌನ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಮೇ. ೨೯ರಂದು ವಸತಿಶಾಲೆಯಲ್ಲಿ ಕಪ್ಪು ಪಟ್ಟಿಧರಿಸಿ ಕರ್ತವ್ಯ ನಿರ್ವಹಿಸಲಾಯಿತು ಎಂದರು.

ಶುಕ್ರವಾರ ತರಗತಿಗಳನ್ನು ಬಹಿಷ್ಕರಿಸಲಾಯಿತು. ಆಜಾದ್‌ವೃತ್ತದಿಂದ ಮೌನಮೆರವಣಿಗೆ ನಡೆಸುವ ಮೂಲಕ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಗುವುದು ಜೂ.೨ರಂದು ನಗರದ ಆಜಾದ್‌ವೃತ್ತ ಅಥವಾ ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.

ಸರ್ಕಾರ ವಸತಿ ಶಿಕ್ಷಣ ನಿರ್ದೇಶನಾಲಯ ರಚಿಸಬೇಕು ಅಥವಾ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ, ಹಿಂದುಳಿದ ವರ್ಗ ವಸತಿ ಶಾಲೆಗಳನ್ನು ಸಿಬ್ಬಂದಿಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ನಗದುರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಟಾನಗೊಳಿಸಬೇಕು. ಮರಣ, ನಿವೃತ್ತಿ ಉಪಧನ ಸೌಲಭ್ಯ ಒದಗಿಸಬೇಕು. ಮನೆಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು. ಹೆಚ್ಚುವರಿ ಕಾರ್ಯಭಾರ ಇರುವುದರಿಂದ ಶೇ.೧೦ರಷ್ಟು ವಿಶೇಷ ಭತ್ಯೆ ನೀಡಬೇಕೆಂಬ ಪ್ರಮುಖ ೫ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ವಸತಿಶಾಲೆಗಳ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಚಿಕ್ಕಮಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಪ್ರಭುಕುಮಾರ್, ತರೀಕೆರೆ ತಾಲೂಕು ಸಂಘಟನಾ ಕಾರ್ಯದರ್ಶಿ ಲಿಂಗರಾಜ್ ಇದ್ದರು.

Teachers of Crays Residential School begin non-cooperation movement

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...