ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಚಿಕ್ಕಮಗಳೂರಿನ 22 ವರ್ಷ ವಯಸ್ಸಿನ ಯುವಕನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದ್ದು, ಯುವಕನಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಸ್ತುತ ಕೋವಿಡ್ ಸೋಂಕಿಗೆ ಒಳಗಾಗಿರುವ ಯುವಕ ಕೆಲದಿನಗಳ ಹಿಂದೆ ಕಚ್ಚಿಗೆ ತೆರಳಿ ವಾಪಸ್ ಆಗಿದ್ದ. ಬಳಿಕ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಯುವಕನನ್ನು ಮೇ 28ರಂದು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಯುವಕನ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಯುವಕನಿಗೆ ಕೋವಿಡ್ ವೈರಸ್ ತಗುಲಿರುವುದು ದೃಢಪಟ್ಟಿದೆ.
ಹೀಗಾಗಿ ಯುವಕ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯುವಕನ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ಡಿಎಚ್ ಒ ಅಶ್ವಥ್ ಬಾಬು ತಿಳಿಸಿದ್ದಾರೆ.
First Covid case detected in the coffee country
Leave a comment