Home ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರ ರಸ್ತೆಗೆ ಉರುಳಿ ಸಂಚಾರ ಸ್ಥಗಿತ
Home

ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರ ರಸ್ತೆಗೆ ಉರುಳಿ ಸಂಚಾರ ಸ್ಥಗಿತ

Share
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
ಕೊಟ್ಟಿಗೆಹಾರ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಪಶ್ಚಿಮ ಘಟ್ಟದಲ್ಲಿ ಶುರುವಾಗಿರುವ ಮಳೆ ಆರ್ಭಟದಿಂದ ಮಣ್ಣಿನ ಜರಿತ, ಮರ ಬಿರುಕು ಮುಂತಾದ ಪ್ರಕೃತಿ ಅಡಚಣೆಗಳ ಸಂಭವ ಹೆಚ್ಚಾಗಿದೆ. ಇಂದು ಬೆಳಿಗ್ಗೆ ಬೃಹತ್ ಮರ ಬಿದ್ದ ಕಾರಣ ನೂರಾರು ವಾಹನಗಳು ಕಿಮೀ ಗಳಷ್ಟು ದೂರ ಸಾಲಾಗಿ ನಿಂತಿದ್ದು, ವಾಹನ ಸವಾರರು ಹಾಗೂ ಪ್ರವಾಸಿಗರು ಪರದಾಡುವ ಸ್ಥಿತಿಯಲ್ಲಿದ್ದಾರೆ.
ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಮರವನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ.
ಈ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿಭಾಗದಲ್ಲಿದ್ದು, ಹಲವು ವರ್ಷಗಳಿಂದ ಮಳೆ ಸಮಯದಲ್ಲಿ ಈ ರೀತಿಯ ಅಡಚಣೆಗಳು ಸಂಭವಿಸುತ್ತಲೇ ಇವೆ. ಸಂಬಂಧಪಟ್ಟ ಇಲಾಖೆಗಳಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Huge tree falls on road at Charmadi Ghat traffic disrupted
Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...