Home 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್
HomechikamagalurLatest Newsnamma chikmagalur

18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್

Share
Share

ಅಹ್ಮದಾಬಾದ್: ನಿರೀಕ್ಷೆಯಂತೆಯೇ ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಆರ್ ಸಿಬಿ ನೀಡಿದ 191 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಪಂಜಾಬ್ ಪರ ಪ್ರಿಯಾಂಶ್ ಆರ್ಯ 24 ರನ್ ಗಳಿಸಿದರೆ, ಪ್ರಭ್ ಸಿಮ್ರನ್ ಸಿಂಗ್ 26 ರನ್ ಗಳಿಸಿ ಔಟಾದರು.

ನಾಯಕ ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ರೊಮಾರಿಯೋ ಶೆಫರ್ಡ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಗೆ ಬಲ ನೀಡಿದ ಜಾಶ್ ಇಂಗ್ಲಿಸ್ 23 ಎಸೆತಗಳಲ್ಲಿ 39 ರನ್ ಗಳಿಸಿದರು. ಆದರೆ ಕೃನಾಲ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಜೀವ ತುಂಬಿದ್ದು ನೇಹಲ್ ವಧೇರಾ (15). ಆದರೆ ಅವರ ರನ್ ಗಳಿಕೆ ಕೂಡ 15ಕ್ಕೇ ಸೀಮಿತವಾಯಿತು. ಅಪಾಯಕಾರಿ ಪರಿಣಮಿಸಿದ್ದ ವಧೇರಾರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು. ಬಳಿಕ ಕ್ರೀಸ್ ಗೆ ಬಂದ ಮಾರ್ಕಸ್ ಸ್ಟಾಯ್ನಿಸ್ ಸಿಕ್ಸರ್ ಭಾರಿಸಿ 2ನೇ ಎಸೆತದಲ್ಲೇ ಭುವನೇಶ್ವರ್ ಕುಮಾರ್ ಗೆ ವಿಕೆಟ್ ಒಪ್ಪಿಸಿದರು.

ಇನ್ನು ಈ ಇನ್ನಿಂಗ್ಸ್ ನಲ್ಲಿ ಪಂಜಾಬ್ ಪರ ಅಂತಿಮ ಹಂತದಲ್ಲಿ ಹೋರಾಟ ನಡೆಸಿದ್ದು ಶಶಾಂಕ್ ಸಿಂಗ್, ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ ಅಜೇಯ 61 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಿಲಿಲ್ಲ. ಅಂತಿಮವಾಗಿ ಪಂಜಾಬ್ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ ಕೇವಲ 6 ರನ್ ಅಂತರದಲ್ಲಿ ಸೋಲು ಕಂಡಿತು.

ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ, ಯಶ್ ದಯಾಳ್, ಜಾಶ್ ಹೇಜಲ್ ವುಡ್ ಮತ್ತು ರೊಮಾರಿಯೋ ಶೆಫರ್ಡ್ ತಲಾ 1 ವಿಕೆಟ್ ಪಡೆದರು.

Royal Challengers Bangalore are champions after 18 years

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...