Home namma chikmagalur ಸಕಾಲದಲ್ಲಿ ಜನನ-ಮರಣ ಮಾಹಿತಿ ನೋಂದಣಿಗೆ ಕ್ರಮ ವಹಿಸಿ
namma chikmagalurchikamagalurHomeLatest News

ಸಕಾಲದಲ್ಲಿ ಜನನ-ಮರಣ ಮಾಹಿತಿ ನೋಂದಣಿಗೆ ಕ್ರಮ ವಹಿಸಿ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜನನ-ಮರಣಗಳ ವಿವರಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ನಿನ್ನೆ ಜನನ-ಮರಣಗಳ ನಾಗರಿಕ ನೋಂದಣಿಯ ತ್ರೈಮಾಸಿಕ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಜಿಲ್ಲಾ ಮಟ್ಟದ ಕೃಷಿ ಅಂಕಿ-ಅಂಶಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಜನ್ಮ ತಂತ್ರಾಂಶದಲ್ಲಿ ಯಾವುದೇ ಜನನ ಮತ್ತು ಮರಣ ಘಟನೆ ನಡೆದ ೨೧ ದಿನಗಳ ಒಳಗಾಗಿ ಕಡ್ಡಾಯವಾಗಿ ಸಂಬಂಧಿಸಿದ ನೋಂದಣಾಧಿಕಾರಿಗಳು ನೋಂದಣಿಯನ್ನು ಮಾಡಬೇಕು. ನೋಂದಣಿ ಮಾಡದೆ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ನೋಂದಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್.ಶಿವಕುಮಾರ್ ಸಭೆಗೆ ಮಾಹಿತಿ ನೀಡಿ, ಜನನ-ಮರಣ ಸಂಭವಿಸಿದ ೨೧ ದಿನಗಳ ನಂತರ ೩೦ ದಿನಗಳ ಅವಧಿಯೊಳಗಿನ ಘಟನೆಯ ತಡ ನೋಂದಣಿಗೆ ಶುಲ್ಕ ರೂ. ೨೦ ಸಂದಾಯದ ನಂತರ ನೋಂದಣಿ ಮಾಡಬೇಕು. ಒಂದು ತಿಂಗಳ ನಂತರ ಒಂದು ವರ್ಷದ ಘಟನೆಗಳನ್ನು ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರ ಮಹಜರು ವರದಿಯೊಂದಿಗೆ ತಹಸೀಲ್ದಾರರ ಆದೇಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಒಂದು ವರ್ಷದ ನಂತರದ ಯಾವುದೇ ಜನನ-ಮರಣ ಘಟನೆಗಳು ಹಾಗೂ ಹೆಸರು ಸೇರ್ಪಡೆಯನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಕೈಗೊಳ್ಳಲು ಹಾಗೂ ಯಾವುದೇ ಪ್ರಯೋಗಗಳು ನಷ್ಟವಾಗದಂತೆ ನೋಡಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಹೊರ ತಂದಿರುವ ೨೦೨೩-೨೪ನೇ ಸಾಲಿನ ಜಿಲ್ಲಾ ಅಂಕಿ-ಅಂಶಗಳ ನೋಟ ಮತ್ತು ಸಾಮಾಜಿಕ ಮತ್ತು ಆರ್ಥಿಕ ಅವಲೋಕನ ಪುಸ್ತಕವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದೇವರಾಜ್, ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ರೇಷ್ಮಾಶೆಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ.ವಿಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಡಿವೈಎಸ್‌ಪಿ ಶೈಲೇಂದ್ರ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Take steps to register birth and death information in a timely manner.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...