Home Crime News ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ – ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ
Crime NewsBanagaloreHomeLatest Newsnamma chikmagalur

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ – ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

Share
Share

ಬೆಂಗಳೂರು: 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತ ದುರಂತದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಬಳಿ ಯಾವುದೇ ದುರಂತ ಸಂಭವಿಸಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ ಅಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್​ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಬಳಿಕ ಕಾವೇರಿ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಿಎಂ, ವಿದ್ಯಾರ್ಥಿಗಳು, ಯುವಕರು, ಯುವತಿಯರು ಮನೆಗೆ ಸೇಫಾಗಿ ತೆರಳಲು ವ್ಯವಸ್ಥೆ ಮಾಡಲು ಸೂಚಿಸಿದರು. ವಿಧಾನಸೌಧ, ಸ್ಟೇಡಿಯಂನ ಸುತ್ತ ಸಂಚಾರ ತೆರವುಗೊಳಿಸಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಅಗತ್ಯ ಭದ್ರತೆ ಕಲ್ಪಿಸಲು ಸೂಚಿಸಿದರು.

Stampede near Chinnaswamy Stadium – Death toll rises to 11

Share

Leave a comment

Leave a Reply

Your email address will not be published. Required fields are marked *

Don't Miss

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ...

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಖಚಿತ...

Related Articles

ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ

ಚಿಕ್ಕಮಗಳೂರು: ಬೆಳ್ಳಿ ಮಾರಾಟದ ಹೆಸರಿನಲ್ಲಿ ನಡೆದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ವಂಚನೆ ಪ್ರಕರಣವನ್ನು ಭೇದಿಸುವಲ್ಲಿ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ...

ಮುಂಗಾರು ಹಾನಿ ತಡೆಗೆ ಕಟ್ಟೆಚ್ಚರ ವಹಿಸಲು ಸೂಚನೆ

ಚಿಕ್ಕಮಗಳೂರು: ಮುಂಗಾರು ಬಿರುಗಾಳಿ ಮಳೆಗೆ ಸಂಭವನೀಯ ಅಪಾಯ, ಹಾನಿ ತಡೆಗಟ್ಟುವುದು ಹಾಗೂ ತುರ್ತು ಕ್ರಮ ವಹಿಸುವ...