Home Latest News ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ
Latest NewschikamagalurHomenamma chikmagalur

ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ

Share
Share

ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಾನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ನಾನು ಬಲ್ಲೆ. ಅವರು ಶಿಸ್ತಿನ ಒಳ್ಳೆಯ ಅಧಿಕಾರಿ. ಅವರನ್ನೂ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಪಡಿಸಿರುವುದು ಸರಿಯಲ್ಲ. ಸರ್ಕಾರ ತಾನು ಮಾಡಿದ ತಪ್ಪನ್ನು ಅವರ ಮೇಲೆ ಹೊರಿಸಿ ನಾವು ಮಾಡಿದ್ದೇ ಸರಿ ಎಂದು ಹೇಳಿದರೆ ಅವರಿಗೆ ತಿಳಿವಳಿಕೆ ಹೇಳುವುದು ಯಾರು ಎಂದು ಪ್ರಶ್ನಿಸಿದರು.

ಕಾರ್ಯಕ್ರಮಕ್ಕೆ ಸರ್ಕಾರದ ಕಡೆಯಿಂದ ಪೂರ್ವ ತಯಾರಿ ಇರಲಿಲ್ಲ. ಪೊಲೀಸ್ ಗುಪ್ತಚರ ಇಲಾಖೆ ಸಹ ಈ ಬಗ್ಗೆ ಎಚ್ಚರಿಸಿತ್ತು. ಅದನ್ನು ಸರ್ಕಾರ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ೧೧ ಮಂದಿ ಅಮಾಯಕರು ಸಾವಿಗೀಡಾದರು. ಆದರೂ ಮುಖ್ಯಮಂತ್ರಿಯಾಗಲಿ, ಉಪ ಮುಖ್ಯಮಂತ್ರಿಯಾಗಲಿ ವಿಷಾಧವನ್ನೂ ಸಹ ವ್ಯಕ್ತಪಡಿಸಿಲ್ಲ. ಅಲ್ಲದೆ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿರುವುದರಲ್ಲಿ ಅರ್ಥವೂ ಇಲ್ಲ ಎಂದರು.

ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಕನಿಷ್ಟ ಸರ್ಕಾರ ವಿಷಾಧ ಹೇಳಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳನ್ನು ಅಮಾನತು ಪಡಿಸುವುದು ಸರಿಯಲ್ಲ ಎಂದು ಹೇಳಿದರು.

The government blamed its mistakes on the officials.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...