Home namma chikmagalur ಅತಿವೇಗದಿಂದ ಸಂಚರಿಸುವ ಟಿಪ್ಪರ್-ಟ್ರ್ಯಾಕ್ಟರ್ ವಿರುದ್ಧ ಕ್ರಮಕ್ಕೆ ಮನವಿ
namma chikmagalurchikamagalurHomeLatest News

ಅತಿವೇಗದಿಂದ ಸಂಚರಿಸುವ ಟಿಪ್ಪರ್-ಟ್ರ್ಯಾಕ್ಟರ್ ವಿರುದ್ಧ ಕ್ರಮಕ್ಕೆ ಮನವಿ

Share
????????????????????????????????????
Share

ಚಿಕ್ಕಮಗಳೂರು: ಕಟ್ಟಡ ನಿರ್ಮಾಣದ ಸಾಮಾಗ್ರಿ ಸಾಗಿಸುವಾಗ ಟಿಪ್ಪರ್ ಲಾರಿಗಳು ಮ ತ್ತು ಟ್ರ್ಯಾಕ್ಟರ್‌ಗಳ ಅತಿವೇಗದಿಂದಾಗಿ ಅಪಘಾತಗಳು ಸಂಭವಿಸಿದ್ದು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಾಲ್ಲೂಕು ಬಹುಜನ ಸಮಾಜ ಪಕ್ಷ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅ ಮಟೆ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಮಾತನಾಡಿ ಇಟ್ಟಿಗೆ, ಜಲ್ಲಿ, ಮರ ಳು, ಮಣ್ಣು ಸೇರಿದಂತೆ ಇನ್ನಿತರೆ ಕಟ್ಟಡ ಸಾಮಾಗ್ರಿಗಳನ್ನು ನಗರಕ್ಕೆ ಮತ್ತು ನಗರದಿಂದ ಹೊರವಲಯಕ್ಕೆ ಸಾಗಿಸುತ್ತಿರುವಾಗ ಮುನ್ನೆಚ್ಚರಿಕಾ ಕ್ರಮ ಪಾಲಿಸದೇ ಏಕಾಏಕಿ ಸಂಚರಿಸಿ ಸಾರ್ವಜನಿಕರಿಗೆ ತೊಂದರೆ ನೀಡ ಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಸುತ್ತಮುತ್ತಲು ಟಿಪ್ಪರ್ ಲಾರಿಗಳು ಮರಳು, ಜಲ್ಲಿ ಯನ್ನು ತುಂಬಿಸಿ ಟಾರ್ಪಲ್ ಹಾಕದೇ ಅತಿವೇಗದಿಂದ ಸಂಚರಿಸುತ್ತಿವೆ. ಇದರಿಂದ ತಿರುವುಗಳಲ್ಲಿ ಬ್ರೇಕ್ ಹಾಕುವ ವೇಳೆಯಲ್ಲಿ ತುಂಬಿರುವ ಸಾಮಾಗ್ರಿಗಳು ಪಾದಚಾರಿಗಳು, ವಾಹನಗಳ ಮೇಲೆ ಬೀಳುತ್ತಿರುತ್ತಿವೆ ಎಂದು ತಿಳಿಸಿದರು.

ಮುಖ್ಯವಾಗಿ ನಗರ ಭಾಗದ ಅರಣ್ಯ ಇಲಾಖೆ, ಹೊಸಮನೆ ಬಡಾವಣೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಆಜಾದ್‌ಪಾರ್ಕ್ ವೃತ್ತದಲ್ಲಿ ಕಟ್ಟಡ ಸಾಮಾ ಗ್ರಿಗಳು ರಸ್ತೆಗೆ ಬೀಳುತ್ತಿರುವ ಪರಿಣಾಮ ಪ್ರತಿನಿತ್ಯವು ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದರು.

ಬಿಎಸ್ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್ ಮಾತನಾಡಿ ಟಿಪ್ಪರ್ ಲಾರಿ ಮತ್ತು ಟ್ರ್ಯಾಕ್ಟರ್‌ಗಳ ವಾಹನಗಳ ಮಾ ಲೀಕರು ನಿಗಧಿಗೊಳಿಸಿದ ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ. ಈ ವಿರುದ್ಧವಾಗಿ ಸಾಗಣೆ ಮಾಡುತ್ತಿರುವ ವಾಹನಗಳ ಮೇಲೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ಜಿಲ್ಲಾ ಉಪಾದ್ಯಕ್ಷ ಕೆ.ಎಸ್.ಮಂಜುಳಾ, ಅಸ್ಲೆಂಬಿ ಉಪಾಧ್ಯಕ್ಷ ಹೊನ್ನಪ್ಪ, ಪ್ರಧಾನ ಕಾರ್ಯದರ್ಶಿ ವಸಂತ್, ನಗರಾಧ್ಯಕ್ಷ ಡಿ.ಹೆಚ್.ವಿಜಯ್ ಕುಮಾ ರ್ ಮತ್ತಿತರರು ಹಾಜರಿದ್ದರು.

Appeal for action against tipper-tractors travelling at high speed

 

 

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...