Home ರೈಲಿನಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ಪತ್ತೆ
Home

ರೈಲಿನಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ಪತ್ತೆ

Share
Share

ಚಿಕ್ಕಮಗಳೂರು: “ಆಪರೇಷನ್ ನಾರ್ಕೋಸ್” ಎಂಬ ವಿಶೇಷ ಕಾರ್ಯಚರಣೆಯ ಅಡಿಯಲ್ಲಿ, ನೈಋತ್ಯ ರೈಲ್ವೆ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ವಿಶೇಷ ತಂಡವು ನಡೆಸಿದ ತಪಾಸಣೆಯಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ದೊರಕಿದೆ.

ರೈಲು ಸಂಖ್ಯೆ 18111 ಟಾಟಾ – ಯಶವಂತಪುರ ಎಕ್ಸ್‌ಪ್ರೆಸ್‌ ನಲ್ಲಿ ಬೀರೂರು ಮತ್ತು ಕಡೂರು ನಿಲ್ದಾಣಗಳ ನಡುವೆ ತಪಾಸಣೆ ನಡೆಸಿದ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ. ತಂಡವು ಜನರಲ್ ಕೋಚ್ ಸಂಖ್ಯೆ SWR 247321 ರಲ್ಲಿ ಪ್ರಾಥಮಿಕ ತನಿಖೆ ವೇಳೆ ವಾರಸುದಾರರು ಇಲ್ಲದ ಬ್ಯಾಗ್ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿದ್ದ ಬ್ಯಾಗ್ ತೆರೆಯಲಾಗಿದ್ದು, ಅದರಲ್ಲಿ ಸುಮಾರು ₹1,25,000 ಮೌಲ್ಯದ 25 ಗ್ರಾಂ ಎಂಡಿಎಂಎ (ಕೃತಕ ಮಾದಕ ವಸ್ತು), ₹90,000 ಮೌಲ್ಯದ 1.522 ಕೆ.ಜಿ ಗಾಂಜಾ ಮತ್ತು ₹1,850 ಮೌಲ್ಯದ 210 ಗ್ರಾಂ ತೂಕದ 37 ಭಾಂಗ್ ಚಾಕೊಲೇಟ್‌ಗಳನ್ನು ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಅಂದಾಜು ಮೌಲ್ಯ ₹2,16,850.

ಈ ಬ್ಯಾಗ್ ಅನ್ನು ಆರ್‌ಪಿಎಫ್ ತಂಡವು ಕಡೂರು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದೆ. ಈ ಕಾರ್ಯಚರಣೆ ಮೈಸೂರು ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಆಯುಕ್ತರಾದ ಶ್ರೀ ಸ್ಯಾಮ್ ಪ್ರಸಾಂತ್ ಜೆ.ಆರ್. ಅವರ ನೇತೃತ್ವದಲ್ಲಿ ನಡೆಯಿತು. ಈ ತಂಡದಲ್ಲಿ ಆನಂದ ಬಿ. (ASI/CIB/MYS, ಕ್ರೈಮ್ ಪ್ರಿವೆನ್ಷನ್ ಡಿಟೆಕ್ಷನ್ ತಂಡದ ಉಸ್ತುವಾರಿ), ಶಿವಾನಂದ ಟಿ, ಹೆಡ್ ಕಾನ್ಸ್ಟೇಬಲ್, ಸಿ. ವೆಂಕಟೇಶ (ASI/RPF/RRB) ಇದ್ದರು.

Drugs worth Rs 2.16 lakh found on train

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...