Home namma chikmagalur ಮೂಡಿಗೆರೆಯಲ್ಲಿ ಬೈಕ್ ಚಾಲಕನಿಗೆ 14 ಸಾವಿರ ರೂ ದಂಡ
namma chikmagalurchikamagalurHomeLatest News

ಮೂಡಿಗೆರೆಯಲ್ಲಿ ಬೈಕ್ ಚಾಲಕನಿಗೆ 14 ಸಾವಿರ ರೂ ದಂಡ

Share
Share

ಚಿಕ್ಕಮಗಳೂರು: ಹೆಲೈಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ದ್ವಿಚಕ್ರ ವಾಹನ ಚಾಲಕನಿಗೆ ಮೂಡಿಗೆರೆ ನ್ಯಾಯಾಲಯ. ೧೪ ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್‌ರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಹೆಲ್ಮಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ತಡೆದು ದಾಖಲೆಗಳನ್ನು ಪರಿಶೀಲಿಸಿದರು.

ಬೈಕ್ ಚಾಲನೆ ಮಾಡುತ್ತಿದ್ದ ರುದ್ರೇಶ್ ನಾಯ್ಕ ಎಂಬ ವ್ಯಕ್ತಿಯು ಹೆಲೈಟ್ ಇಲ್ಲದೇ ಬೈಕ್ ಚಾಲನೆ ಮಾಡುತ್ತಿದ್ದುದು ಅಲ್ಲದೇ ವಾಹನದ ಹೊಗೆ ತಪಾಸಣೆ ಮಾಡಿಸದೇ ಇರುವುದು, ಡಿ.ಎಲ್. ಇಲ್ಲದೇ ಬೈಕ್ ಚಾಲನೆ ಮಾಡುತ್ತಿದುದು, ಬೈಕ್ ಗೆ ಸೂಕ್ತ ದಾಖಲೆಗಳನ್ನು ಹೊಂದಿಲ್ಲದಿರುವುದು ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ಬೈಕ್ ಸವಾರನ ಮೇಲೆ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಪ್ರಕರಣವನ್ನು ತ್ವರಿತವಾಗಿ ಮತ್ತು ಗಂಭೀರವಾಗಿ ಪರಿಗಣಿಸಿದ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾದೀಶರು ಬೈಕ್ ಚಾಲಕನಿಗೆ . ೧೪ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಇತ್ತೀಚೆಗೆ ಅಪ್ತಾಪ್ತ ವಯಸ್ಕನೋರ್ವನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ್ದ ವಾಹನ ಮಾಲೀಕರಿಗೆ ಮೂಡಿಗೆರೆ ನ್ಯಾಯಾಲಯ ರೂ. ೨೫ ಸಾವಿರ ದಂಡ ವಿಧಿಸಿತ್ತು.

Biker fined Rs 14000 in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...