ಚಿಕ್ಕಮಗಳೂರು: ಮನೆ ಮನೆಗೆ ನೀರು ಪೂರೈಸುವ ಜಲಜೀವನ ಮಿಷನ್ (ಜೆಜೆಎಂ) ಯೋಜನೆ ಕಾಮಗಾರಿ ಬಗ್ಗೆ ಸಾಕಷ್ಟು ಆರೋಪಗಳಿದ್ದು, ಕಾಮಗಾರಿ ಕಳಪೆಯಾಗಿದ್ದರೆ ತನಿಖೆಗೆ ಶಿಫಾರಸು ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ದಿಶಾ(ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ಜಲಜೀವನ ಮಿಷನ್ ಕಾಮಗಾರಿಯಲ್ಲಿ ಟ್ಯಾಂಕ್ ನಿರ್ಮಾಣ, ಪೈಪ್ಲೈನ್ ಅಳವಡಿಕೆ ಸೇರಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ಕಳಪೆಯಾಗಿದೆ ಎಂದು ಸಾರ್ವಜನಿಕರು ಎಲ್ಲೆಡೆ ದೂರುತ್ತಿದ್ದಾರೆ. ಅದ್ದರಿಂದ ಎಲ್ಲಾ ಮಾಹಿತಿಯನ್ನೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿಗಳು ತರಬೇಕು ಎಂದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು. ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿಕೊಳ್ಳುವ ಮುನ್ನ ಅಭಿವೃದ್ಧಿ ಅಧಿಕಾರಿಗಳು ಗುಣಮಟ್ಟ ಪರಿಶೀಲನೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ವಿಧಾನ ಪರಿ?ತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ’ಈ ಯೋಜನೆ ಅನು?ನದಲ್ಲಿ ಸಾಕ? ಲೋಪಗಳಾಗಿವೆ. ಕಾಮಗಾರಿ ಮುಗಿದಿದ್ದರೂ ನೀರಿನ ಸಂಪರ್ಕ ಕಲ್ಪಿಸಿಲ್ಲ. ನೀರಿನ ಮೂಲವನ್ನೇ ಗುರುತಿಸದೆ ಪೈಪ್ಲೈನ್ ಅಳವಡಿಕೆ ಮಾಡಲಾಗಿದೆ. ಎಂದರು.
ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಜನರ ಕೆಲಸ ಮಾಡುವತ್ತ ಗಮನ ಹರಿಸಬೇಕು. ಯಾವುದನ್ನೂ ಪರಿಶೀಲನೆ ನಡೆಸದೆ ಬಿಲ್ಗಳಿಗೆ ಸಹಿ ಹಾಕಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಸ್ತೆ ಅಗಲೀಕರಣದಿಂದ ಹೆಚ್ಚು ಮರಗಳು ಹಾನಿಯಾಗಿದ್ದು, ಇದರಿಂದ ಪಕ್ಷಿಗಳಿಗೆ ಆಹಾರ ಸಿಗದಂತಾಗಿದೆ. ಹಣ್ಣು ಬಿಡುವ ಮರಗಳಾದ ನೇರಳೆ, ಮಾವು, ಅತ್ತಿ ಮುಂತಾದ ಮರಗಳನ್ನು ಬೆಳಸುವಂತೆ ಸೂಚಿಸಿದರು. ಶಿಕ್ಷಣ ಮೂಲಭೂತ ಹಕ್ಕಾಗಿರುವುದರಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಕಡ್ಡಾಯವಾಗಿ ಕರೆತರುವುದು ನಮ್ಮ ಕರ್ತವ್ಯವಾಗಿದ್ದು ೧೯೫ ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಹಿಂದಿನ ಸಭೆಯಲ್ಲಿ ಮಾಹಿತಿ ನೀಡಲಾಗಿತ್ತು. ಇದರ ಬಗ್ಗೆ ಪ್ರಶ್ನಿಸಿದಾಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಕರೆತಂದು ಶಿಕ್ಷಣ ನೀಡಲು ಮುಂದಾಗುತ್ತೇವೆ ಎಂದು ಹೇಳಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಮಾಸಾಶನ ಸಿಗದೆ ಸಮಸ್ಯೆಯಾಗುತ್ತಿದ್ದು ಅದರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಅಧ್ಯಕ್ಷರು ತಿಳಿಸಿದರು. ಕೃಷಿ ಇಲಾಖೆಯಿಂದ ನೀಡುವ ಯಾವುದೇ ಯೋಜನೆಗಳು ರೈತರಿಗೆ ತಲುಪದೇ ಇದ್ದಲ್ಲಿ ಅಥವಾ ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿದ್ದಲ್ಲಿ ಅಧಿಕಾರಿಗಳು ಈ ಕುರಿತು ರೈತರಿಗೆ ಮಾಹಿತಿ ನೀಡಿ ಜಾಗೃತಿಗೊಳಿಸಿ ಅವರ ಅಗತ್ಯತೆಗಳನ್ನು ಪೂರೈಸಬೇಕೆಂದು ತಿಳಿಸಿದರು
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಶಾಸಕರುಗಳಾದ ಹೆಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ವಿಕ್ರಮ್ ಅಮಟೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Action to be taken if the work of the Jaljeevan Mission is poor
Leave a comment