Home Latest News ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷ ಸುಜಾತಾ ಶಿವಕುಮಾರ್
Latest NewschikamagalurHomenamma chikmagalur

ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷ ಸುಜಾತಾ ಶಿವಕುಮಾರ್

Share
Share

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ್ ಸಲ್ಲಿಸಿದ್ದ ರಾಜೀನಾಮೆ ವಾಪಸ್ ಪಡೆದಿದ್ದು, ನಗರಸಭೆ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಬಿಜೆಪಿ ಆಂತರಿಕ ಒಪ್ಪಂದದ ಪ್ರಕಾರ ಜೂನ್‌ 2ರಂದು ರಾಜೀನಾಮೆ ಸಲ್ಲಿಸಿದ್ದರು. ವಾಪಸ್ ಪಡೆಯಲು 10 ದಿನ ಅವಕಾಶ ಇರುವುದರಿಂದ ವಾಪಸ್ ಪಡೆಯದಿದ್ದರೆ ಗುರುವಾರ ಅಂಗೀಕರವಾಗುತ್ತಿತ್ತು. ಎರಡು ದಿನ ಮುನ್ನವೇ(ಮಂಗಳವಾರ) ವಾಪಸ್ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯ ಒಪ್ಪಂದದ ಪ್ರಕಾರ ಮುಂದಿನ ಅವಧಿಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಬೇಕಿತ್ತು. ಸುಜಾತಾ ಅವರು ರಾಜೀನಾಮೆ ವಾಪಸ್ ಪಡೆದಿರುವುದು ಎರಡೂ ಪಕ್ಷಗಳ ಮುಖಂ ಡರಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡಿದೆ. ಎರಡೂ ಪಕ್ಷಗಳ ಮುಖಂಡರು ಬುಧವಾರ ರಾತ್ರಿ ತನಕ ಸಭೆ ನಡೆಸಿದರು. ಸುಜಾತಾ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

‘ಸುಜಾತಾ ಅವರು ಮೊದಲು ನೀಡಿದ್ದ ರಾಜೀನಾಮೆ ಪತ್ರದಲ್ಲಿ ಸಹಿ ವ್ಯತ್ಯಾಸ ಆಗಿದ್ದರಿಂದ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಗುರುವಾರ ಮತ್ತೆ ಹೊಸದಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ ಸಭೆಯ ಬಳಿಕ  ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಸುಜಾತಾ ಶಿವಕುಮಾರ್, ‘ನನ್ನ ಅಧಿಕಾರ ಅವಧಿಯಲ್ಲಿ ನಡೆದಿರುವ ಕೆಲಸಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಬೇಕಿದೆ. ಅದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ. ಮುಂದೆ ಜೆಡಿಎಸ್‌ಗೆ ಅಧಿಕಾರ ಬಿಟ್ಟುಕೊಡಬೇಕಿದ್ದು, ಬಿಜೆಪಿಯ ಅವಧಿಯ ಕೆಲಸಗಳನ್ನು ಜನರಿಗೆ ತಿಳಿಸಲು ರಾಜೀನಾಮೆ ಹಿಂಪಡೆದಿದ್ದೇನೆ ಅಷ್ಟೆ’ ಎಂದು ಹೇಳಿದರು.

Municipal Council President Sujatha Shivakumar withdraws her resignation

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...