Home namma chikmagalur ಪ್ರಧಾನಿ ನರೇಂದ್ರ ಮೋದಿ ಆಡಳಿತ ವಿಕಸಿತ ಭಾರತ’ಕ್ಕೆ ಭದ್ರ ಬುನಾದಿ
namma chikmagalurchikamagalurHomeLatest News

ಪ್ರಧಾನಿ ನರೇಂದ್ರ ಮೋದಿ ಆಡಳಿತ ವಿಕಸಿತ ಭಾರತ’ಕ್ಕೆ ಭದ್ರ ಬುನಾದಿ

Share
????????????????????????????????????
Share

ಚಿಕ್ಕಮಗಳೂರು: ಕೇಂದ್ರದಲ್ಲಿ 11 ವರ್ಷ ಆಡಳಿತ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅದಕ್ಕೂ ಹಿಂದಿನ ದಶಕಗಳಲ್ಲಿ ಇದ್ದ ಜಡತ್ವ ಮುರಿದು, ದಿಟ್ಟ ನಿರ್ಧಾರಗಳ ಮೂಲಕ ‘ವಿಕಸಿತ ಭಾರತ’ಕ್ಕೆ ಭದ್ರ ಬುನಾದಿ ಹಾಕಿದ್ದಾರೆ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೇಂದ್ರ ಸರ್ಕಾರದ ಆಡಳಿತವು ಸಮೃದ್ಧ, ಸ್ವಾಭಿಮಾನಿ, ಶಕ್ತಿಶಾಲಿ ಆಡಳಿತ ನೀಡಿದೆ. ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲ. ಅಮೆರಿಕ ನಡೆಸಿದ ಸಮೀಕ್ಷೆಯಲ್ಲಿ ಜಗತ್ತಿನ 50 ಭ್ರಷ್ಟಾಚಾರ ರಹಿತ ಮುಖಂಡರ ಪಟ್ಟಿಯಲ್ಲಿ ನರೇಂದ್ರ ಮೋದಿ ಅವರ ಹೆಸರು ಮೊದಲ ಸ್ಥಾನದಲ್ಲಿ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಕರ್ನಾಟಕಕ್ಕೆ ಆರ್ಥಿಕ ಸಹಾಯ ಮತ್ತು ನಿಷ್ಪಕ್ಷಪಾತವಾದ ತೆರಿಗೆ ಹಂಚಿಕೆ ಮಾಡಿದೆ. ಒಟ್ಟು ₹2.36 ಲಕ್ಷ ಕೋಟಿ ಕರ್ನಾಟಕಕ್ಕೆ ನೀಡಿದೆ. 2004ರಿಂದ 2014ರ ವರೆಗೆ ಯುಪಿಎ ಸರ್ಕಾರ ನೀಡಿದ್ದ ₹60 ಸಾವಿರ ಕೋಟಿಗೆ ಹೋಲಿಸಿದರೆ ಶೇ 243ರಷ್ಟು ಅಧಿಕ. ಇದು ಐತಿಹಾಸಿಕ ದಾಖಲೆ’ ಎಂದರು.

ಯುಪಿಎ ಸರ್ಕಾ ರದ 10 ವರ್ಷಗಳ ಅವಧಿಯಲ್ಲಿ ಶೇ 8.2ರಷ್ಟಿದ್ದ ಸರಾಸರಿ ಹಣದುಬ್ಬರ, ಎನ್‌ಡಿಎ ಸರ್ಕಾರದ 11 ವರ್ಷಗಳ ಅವಧಿಯಲ್ಲಿ ಶೇ 5ಕ್ಕೆ ಇಳಿಕೆಯಾಗಿದೆ. ಯುಪಿಎ 2 ಕೋಟಿ ಉದ್ಯೋಗ ಸೃಷ್ಟಿಸಿದ್ದರೆ, ಎನ್‌ಡಿಎ 17 ಕೋಟಿ ಉದ್ಯೋಗ ಸೃಷ್ಟಿಸಿದೆ ಎಂದು ಮಾಹಿತಿ ನೀಡಿದರು.

ಯುಪಿಎ ಅವಧಿಯಲ್ಲಿ ಬಡತನ ಶೇ 29.2ರಷ್ಟಿದ್ದರೆ, ಎನ್‌ಡಿಎ ಅವಧಿಯಲ್ಲಿ ಶೇ 11.3ಕ್ಕೆ ಇಳಿಕೆಯಾಗಿದೆ. ಆದಾಯ ತೆರಿಗೆ ಸಂಗ್ರಹದಲ್ಲೂ ಎನ್‌ಡಿಎ ಅಧಿಕಾರದಲ್ಲಿ ಹೆಚ್ಚಳ ಆಗಿದೆ. ಯುಪಿಎ ಅವಧಿಯಲ್ಲಿ 5 ನಗರಗಳಲ್ಲಿ 248 ಕಿ.ಮೀ ಮೆಟ್ರೊ ರೈಲು ಮಾರ್ಗ ನಿರ್ಮಾಣವಾಗಿದ್ದರೆ, ಎನ್‌ಡಿಎ ಅವಧಿಯ 11 ವರ್ಷಗಳಲ್ಲಿ 29 ನಗರಗಳಲ್ಲಿ 1,013 ಕಿ.ಮೀ. ಮೆಟ್ರೊ ರೈಲು ಮಾರ್ಗ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಗೆ ₹8,408 ಕೋಟಿ ಮತ್ತು ಬೆಂಗಳೂರಿನ ಸೆಟಲೈಟ್ ಟೌನ್ ರಿಂಗ್ ರಸ್ತೆಗೆ ₹27 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ನೈಋತ್ಯ ರೈಲ್ವೆಗೆ ವಾರ್ಷಿಕ ಸರಾಸರಿ ಅನುದಾನ ₹3,424 ಕೋಟಿಗೆ ಏರಿಕೆಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ₹835 ಕೋಟಿ ಇತ್ತು ಎಂದು ವಿವರಿಸಿದರು.

‘ಜಾತಿ ಗಣತಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯ ಕೊಡಿಸುತ್ತಾರೆ ಎಂದು ಹಿಂದುಳಿದ ವರ್ಗದವರು ನಂಬಿದ್ದರು. ಆದರೆ, ಈಗ ಪಲಾಯನ ಮಾಡಿದ್ದಾರೆ’ ಎಂದು  ಆರೋಪಿಸಿದರು.

‘ಈ ವಿಷಯದಲ್ಲಿ ನಿಮ್ಮ ಹೈಕಮಾಂಡ್ ಹೇಳಿದ ಕಾರಣಕ್ಕೆ ವಾಪಸ್ ಪಡೆಯಲು ಹೊರಟಿದ್ದೀರಿ. ಇದಕ್ಕಿಂತ ಹಾಸ್ಯಸ್ಪದ ವಿಷಯ ಮತ್ತೊಂದಿಲ್ಲ’ ಎಂದರು.

‘ಸಿದ್ದರಾಮಯ್ಯ ಅವರು ದೇವರಾಜು ಅರಸು ಮಾದರಿಯಲ್ಲಿ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಿಸುತ್ತಾರೆ ಎಂದು ನಂಬಿದ್ದೆವು. ಈ ನಿರ್ಧಾರದಲ್ಲಿ ಸಿದ್ದರಾಮಯ್ಯ ಅವರ ಸ್ವಂತಿಕೆ ಇಲ್ಲವಾಗಿದೆ. ನಿಮ್ಮ ಗೌರವ, ಘನತೆ, ನಿಮ್ಮ ಸಾರ್ವಜನಿಕ ಜೀವನದ ಒಟ್ಟು ಮೌಲ್ಯಗಳಿಗೆ ಈ ನಿರ್ಧಾರ ಸೆಡ್ಡು ಹೊಡೆದಿದೆ. ಶಸ್ತ್ರ ತ್ಯಾಗ ಮಾಡಿರುವ ಅಸಹಾಯಕ ಯೋಧನಂತೆ ಕಾಣಿಸುತ್ತಿದ್ದೀರಿ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ, ಬೆಳವಾಡಿ ರವಿಂದ್ರ, ರಂಗನಾಥ್, ಈಶ್ವರಹಳ್ಳಿ ಮಹೇಶ, ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಭಾಗವಹಿಸಿದ್ದರು.

Prime Minister Narendra Modi’s administration lays a solid foundation for a developed India

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...