Home Latest News ಕಾಫಿನಾಡಲ್ಲಿ ಪ್ರತ್ಯೇಕ ಅಪಘಾತ-ಓರ್ವನ ಸಾವು
Latest NewschikamagalurCrime NewsHomenamma chikmagalur

ಕಾಫಿನಾಡಲ್ಲಿ ಪ್ರತ್ಯೇಕ ಅಪಘಾತ-ಓರ್ವನ ಸಾವು

Share
Share

ಚಿಕ್ಕಮಗಳೂರು: ಕಾಫಿನಾಡಲ್ಲಿ 2 ಸರ್ಕಾರಿ ಬಸ್ ಗಳ ಪ್ರತ್ಯೇಕ ಅಪಘಾತಗಳು ನಡೆದಿದ್ದು, ಓರ್ವ ಮೃತಪಟ್ಟು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಜೂ.13ರ ಶುಕ್ರವಾರ ಕಡೂರು ಪಟ್ಟಣದ ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ನಡೆದಿದೆ.

ಕಡೂರು ಪಟ್ಟಣದ ಹುಸೇನ್ (23) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ.ಹುಸೇನ್ ಕಡೂರು ಎಪಿಎಂಸಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸರ್ಕಾರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಇನ್ನೊಂದೆಡೆ ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಬಸ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನೊಂದೆಡೆ ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಂಬ ಬಸ್ ಮೇಲೆ ಮುರಿದು ಬಿದ್ದ ಘಟನೆ ಜೂ.13ರ ಶುಕ್ರವಾರ ಜಿಲ್ಲೆಯ ಕಡೂರು-ಕೊಪ್ಪ ತಾಲೂಕಿನಲ್ಲಿ ನಡೆದಿದೆ. ವಿದ್ಯುತ್ ಲೈನ್ ನ ಪ್ಯೂಸ್ ತುಂಡಾಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.

Separate accident in Kaffi Nadu – one dead

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...