Home ವಿದ್ಯುತ್‌ ಸ್ಪರ್ಷಕ್ಕೆ ವಾಟರ್ ಮ್ಯಾನ್ ಸಾವು
HomeCrime NewsLatest Newsnamma chikmagalurTarikere

ವಿದ್ಯುತ್‌ ಸ್ಪರ್ಷಕ್ಕೆ ವಾಟರ್ ಮ್ಯಾನ್ ಸಾವು

Share
Share

ತರೀಕೆರೆ: ವಾಟರ್ ಹಿಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ.

ಮೋಹನ್ (34) ಮೃತ ದುರ್ದೈವಿ. ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೋಹನ್ ಇಂದು ಬೆಳಗ್ಗೆ ನೀರು ಬಿಡಲು ಹೋಗಿದ್ದ ವೇಳೆ ಮೋಟರ್ ನ ಸ್ಟೇಟರ್ ಗೆ ಪ್ಯೂಸ್ ಹಾಗುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂದಲೆಳೆ ಅಂತರದಿಂದ ಪಾರಾಗಿದ್ದರು.

ನಂತರ ಮನೆಗೆ ಬಂದಿದ್ದ ಅವರು ಕುಡಿಯಲು ನೀರು ಬಿಸಿ ಮಾಡಲು ಬಳಸುವ ವಾಟ‌ರ್ ಹಿಟರ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಈ ವೇಳೆ ಮನೆಯಲ್ಲಿದ್ದವರು ಮೋಹನ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯದರು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇಬ್ಬರು ಪುಟ್ಟ ಮಕ್ಕಳನ್ನು ಅಗಲಿರುವ ಮೋಹನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕ್ರೂರ ವಿಧಿಯ ಆಟಕ್ಕೆ ಮೋಹನ್ ಬಲಿಯಾಗಿರುವುದನ್ನು ಕಂಡು ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Waterman dies due to electric shock

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...