Home Latest News ಜೂ.18ಕ್ಕೆ ನಗರದಲ್ಲಿ ನಗರದಲ್ಲಿ ಸಿಪಿಐ ತಾಲೂಕು ಸಮ್ಮೇಳನ
Latest NewschikamagalurHomenamma chikmagalur

ಜೂ.18ಕ್ಕೆ ನಗರದಲ್ಲಿ ನಗರದಲ್ಲಿ ಸಿಪಿಐ ತಾಲೂಕು ಸಮ್ಮೇಳನ

Share
Share

ಚಿಕ್ಕಮಗಳೂರು:  ಭಾರತ ಕಮ್ಯುನಿಷ್ಟ ಪಕ್ಷ ಸ್ಥಾಪನೆಯಾಗಿ ಇಲ್ಲಿಗೆ ೧೦೦ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಸಮ್ಮೇಳನಗಳು ನಡೆಯುತ್ತಿದ್ದು, ಅದಕ್ಕೆ ಪೂರಕವಾಗಿ ಜೂ.೧೮ ರಂದು ನಗರದಲ್ಲಿ ಸಿಪಿಐ ತಾಲೂಕು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸಿಪಿಐ ಕಚೇರಿಯ ಬಿ.ಕೆ.ಸುಂದರೇಶ್ ಸಭಾಂಗಣದಲ್ಲಿ ಅಂದು ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪ್ರಸ್ತುತ ದೇಶ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ವಿಶ್ಲೇಷಣೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿವೆ. ದಿನೇ ದಿನೆ ನಿರುದ್ಯೋಗ ಸಮಸ್ಯೆ, ಬಡತನ ವೃದ್ಧಿಯಾಗುತ್ತಿದೆ ಎಂದು ದೂರಿದರು.

ಅಗತ್ಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಬಡವರು ಮತ್ತು ಶ್ರೀಮಂತರ ಮಧ್ಯೆ ಅಂತರ ತೀವ್ರಗೊಳ್ಳುತ್ತಿದೆ. ಕೂಲಿ ಕಾರ್ಮಿಕರು ಸಂಕಷ್ಟದ ಬದುಕನ್ನು ಕಳೆಯುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ, ಆರೋಗ್ಯ ಕೈಗೆಟುಕದಂತಾಗಿದೆ. ಬಡವರಿಗೆ ವಾಸಿಸಲು ಮನೆ, ನಿವೇಶನ ಇಲ್ಲ ಈ ಎಲ್ಲ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದರು.

ಸರಕಾರದ ಈ ಜನವಿರೋಧಿ ಧೋರಣೆಗಳ ವಿರುದ್ಧ ಹೋರಾಟ ರೂಪಿಸಲು ಸಿಪಿಐ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗುವುದು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ಸಹಕಾರ್ಯದರ್ಶಿ ಹೆಡದಾಳ್‌ಕುಮಾರ್, ನಗರ ಕಾರ್ಯದರ್ಶಿ ರಮೇಶ್, ಜಿಲ್ಲಾ ಮಂಡಳಿ ಸದಸ್ಯ ವಸಂತಕುಮಾರ್ ಉಪಸ್ಥಿತರಿದ್ದರು.

CPI taluk conference in the city on June 18th

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...