ಶೃಂಗೇರಿ: ಶೃಂಗೇರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ತನಿಕೋಡಿನಿಂದ ಎಸ್.ಕೆ.ಬಾರ್ಡರ್ ತನಕ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಿರಿದಾದ ರಸ್ತೆಯಲ್ಲಿ ತಿರುವುಗಳು, ಕಡಿದಾದ ಏರಿ, ತುಂಗಾ ನದಿಯ ದಂಡೆಯಿಂದ ಕೂಡಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಕುಸಿಯುವ ಸಾಧ್ಯತೆ ಇದೆ. ಆದ್ದರಿಂದ ಭಾರಿ ವಾಹನಗಳ ಸಂಚಾರ ಸೆ.30ರ ತನಕ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬದಲಿ ಮಾರ್ಗಗಳನ್ನು ಜಿಲ್ಲಾಧಿಕಾರಿ ಸೂಚಿಸಿದ್ದು, ಚಿಕ್ಕಮಗಳೂರು ಕಡೆಯಿಂದ ಬರುವ ವಾಹನಗಳು ಬಾಳೆಹೊನ್ನೂರು– ಮಾಗುಂಡಿ–ಕಳಸ–ಕುದುರೆಮುಖ–ಎಸ್.ಕೆ.ಬಾರ್ಡರ್ ಮಾರ್ಗದಲ್ಲಿ ಸಂಚರಿಸಬಹುದು.
ಎನ್.ಆರ್.ಪುರ ಕಡೆಯಿಂದ ಬರುವ ವಾಹನಗಳೂ ಬಾಳೆಹೊನ್ನೂರು ತಲುಪಿ ಇದೇ ಮಾರ್ಗದಲ್ಲಿ ಸಾಗಬೇಕು. ಕೊಪ್ಪ ಕಡೆಯಿಂದ ಬರುವ ವಾಹನಗಳು ಇದೇ ಬಾಳೆಹೊನ್ನೂರು ತಲುಪಿ ಮಾರ್ಗದಲ್ಲಿ ಸಂಚರಿಸಬೇಕು ಎಂದು ತಿಳಿಸಿದ್ದಾರೆ.
Heavy vehicles banned at Thanikodu-SK border for four months
Leave a comment