ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದ್ದು, ಕೊಪ್ಪ ತಾಲ್ಲೂಕಿನ ಮೇಗೂರು ಬಳಿ ಭಾರಿ ಗಾತ್ರದ ಮರವು ಬುಡಸಹಿತ ರಸ್ತೆ ಮೇಲೆ ಉರುಳಿಬಿದ್ದಿದೆ.
ಈ ಘಟನೆ ಮೇಗೂರಿನಿಂದ ಕೊಗ್ರೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಜಯಪುರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಮರ ತೆರವು ಕಾರ್ಯ ನಡೆಸಲಾಗಿದೆ.
ಕೊಪ್ಪ ತಾಲ್ಲೂಕಿನಲ್ಲಿ ಇದೇ ರೀತಿಯ ಪರಿಸ್ಥಿತಿ ಮುಂದುವರಿದರೆ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
A huge tree fell in Koppa taluk and blocked the road
Leave a comment