Home Latest News ಬಾಲ್ಯವಿವಾಹ ತಡೆಗೆ ಪ್ರತೀ ಇಲಾಖೆಯ ಪಾತ್ರ ಮುಖ್ಯ
Latest NewschikamagalurHomenamma chikmagalur

ಬಾಲ್ಯವಿವಾಹ ತಡೆಗೆ ಪ್ರತೀ ಇಲಾಖೆಯ ಪಾತ್ರ ಮುಖ್ಯ

Share
Share

ಚಿಕ್ಕಮಗಳೂರು: ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪ್ರತಿಯೊಂದು ಇಲಾಖೆಗಳ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.

ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ `ಭದ್ರ ಬಾಲ್ಯ’ ಬಾಲ್ಯ ವಿವಾಹ, ಬಾಲ್ಯ ಗರ್ಭಿಣಿ, ಪೋಕ್ಸೋ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಮತ್ತು ಇನ್ನಿತರೆ ಶಿಶು ಕೇಂದ್ರಿತ ವಿಷಯಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವ ಸಮಯದಲ್ಲಿ, ಮದುವೆ, ಗಂಡ, ಮಕ್ಕಳೇನೆಂದು ಅರಿವಿಲ್ಲದ ಸಂದರ್ಭದಲ್ಲಿ ಮದುವೆ ಮಾಡಿದಲ್ಲಿ ಸಮಸ್ಯೆಗೆ ಸಿಲುಕುತ್ತಾರೆ. ಜೊತೆಗೆ ಗರ್ಭಕೋಶದ ತೊಂದರೆ, ರಕ್ತಹೀನತೆಯಿಂದ ಬಳಲುತ್ತಾರೆ. ಬಾಲ್ಯದಲ್ಲಿ ವಿವಾಹ ಮಾಡಿದರೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಇಡೀ ಜೀವನ ಹಾಳು ಮಾಡಿಕೊಂಡು ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದ ಅವರು, ಬಾಲ್ಯ ವಿವಾಹ ತಡೆಯುವ ಸಲುವಾಗಿ ವಿವಿಧ ಇಲಾಖೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಅದರಂತೆ ಕಾರ್ಯಪ್ರವೃತ್ತರಾಗಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಮಾತನಾಡಿ, ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು ಗರ್ಭಿಣಿಯಾಗುವುದನ್ನು ತಡೆಗಟ್ಟುವಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಏಳು ದಿನಗಳಿಗಿಂತ ಹೆಚ್ಚಿನ ಅವಧಿಗೆ ಶಾಲೆಗೆ ಗೈರುಹಾಜರಾದಲ್ಲಿ ಆ ಶಾಲೆಯ ಶಿಕ್ಷಕರು ಅನುಸರಣೆ ಮಾಡಿ ಶಾಲೆಗೆ ಮರು ಹಾಜರಾಗುವಂತೆ ನೋಡಿಕೊಳ್ಳಬೇಕು. ಶಾಲೆಗೆ ಗೈರು ಹಾಜರಾಗುವ ವಿದ್ಯಾರ್ಥಿಗಳ ಮಾಹಿತಿ ಲಭ್ಯವಾಗದ ಪ್ರಕರಣಗಳು ಕಂಡು ಬಂದಲ್ಲಿ ಆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಾವಲು ಸಮಿತಿಗೆ ವರದಿ ನೀಡಬೇಕು.

ಶಾಲೆಗೆ ಗೈರುಹಾಜರಾಗಲು ನಿಖರವಾದ ಕಾರಣಗಳನ್ನು ತಿಳಿದು ಶಾಲೆಗೆ ಮರು ದಾಖಲೆಗೆ ಕ್ರಮ ವಹಿಸಬೇಕು. ಶಾಲೆಗಳಲ್ಲಿ ಪ್ರಮುಖವಾಗಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಶಾಲಾ ಆವರಣದಲ್ಲಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಬೇಕು, ಬಾಲ್ಯ ವಿವಾಹ ನಡೆಯುವ ಕುರಿತು ಮಾಹಿತಿ ದೊರೆತಲ್ಲಿ ಸಹಾಯವಾಣಿ ಹಾಗೂ ಅಧಿಕಾರಿಗಳ ಮಾಹಿತಿಯನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದರು.

ಶಾಲೆಗಳಲ್ಲಿ ಕಡ್ಡಾಯವಾಗಿ ಪೋಷಕರ ಸಭೆಗಳನ್ನು ಏರ್ಪಡಿಸಿ, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದ ಅವರು, ಶಾಲಾ ವ್ಯಾಪ್ತಿಯ ಆರೋಗ್ಯಾಧಿಕಾರಿಗಳನ್ನು ಭೇಟಿ ಮಾಡಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಬೇಕು ಎಂದು ತಿಳಿಸಿದರು.

ಬಾಲ ಗರ್ಭಿಣಿಯರ ನಿಖರವಾದ ವಯಸ್ಸನ್ನು ದಾಖಲಿಸಲು ಆರೋಗ್ಯ ಕೇಂದ್ರಗಳಲ್ಲಿ ವಯಸ್ಸಿನ ಮ್ಯಾಟ್ರಿಕ್ಸ್ ಸೂಚ್ಯಂಕ(ಏಜ್ ಮ್ಯಾಟ್ರಿಕ್ಸ್ ಇಂಡೆಕ್ಸ್)ವನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿಯರ ಬಗ್ಗೆ ವರದಿ ಮಾಡಲು ಸರಳೀಕೃತ ವಿಧಾನ ಅಳವಡಿಸಬೇಕು. ವೈದ್ಯರ ಸಲಹೆ ಇಲ್ಲದೆ ಗರ್ಭಪಾತ ಮಾಡುವಂತಹ ಮಾತ್ರೆಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಔಷಧ ನಿಯಂತ್ರಣ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸರ್ಕಾರಿ, ಖಾಸಗಿ ವಸತಿ ಶಾಲೆಗಳಿಗೆ ನಿಗದಿತವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಿ ಕಾಲ ಕಾಲಕ್ಕೆ ಸಭೆಗಳನ್ನು ನಡೆಸಿ, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾತನಾಡಿ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಯ ೧೦೯೮ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರಲ್ಲದೆ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಯಾವುದೇ ಕಾರಣಕ್ಕೂ ಹಳ್ಳಿಗಳಲ್ಲಿ ಪ್ರಕರಣಗಳನ್ನು ಮುಚ್ಚಿ ಹಾಕಲು ಪ್ರಯತ್ನಿಸಬಾರದು. ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಜರುಗಿಸಿದರೆ ಮುಂದೆ ಇಂತಹ ಪ್ರಕರಣಗಳು ನಡೆಯುವುದಿಲ್ಲ ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Every department has an important role to play in preventing child marriage.

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...