ಚಿಕ್ಕಮಗಳೂರು: ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ಯೋಗಾಭ್ಯಾಸದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜೂನ್ ೧೮ ರಂದು ಬೆಳಿಗ್ಗೆ ನಗರದ ತಾಲ್ಲೂಕು ಕಚೆರಿ ಆವರಣದಿಂದ ಎಂ.ಜಿರಸ್ತೆಯಿಂದ ನೇತಾಜಿ ಸುಭಾಷ್ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಯೋಗ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಬಿ.ಸಿ.ಸುಜಾತ ಶಿವಕುಮಾರ್ ಹಸಿರು ನಿಶಾನೆ ತೋರಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಎಸ್.ಎಸ್.ಘಟಕ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮೇರಾ ಯುವ ಭಾರತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಭಾರತ ಸೇವಾ ದಳ, ವಿವಿಧ ಯೋಗ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಜಾಥಾದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಭಾಗ್ಯಕ್ಕ, ಪ್ರಭೋದಿನಿ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಹೆಚ್.ಸಿ.ಸುರೇಂದ್ರ, ಹರಿದ್ವಾರದ ಭಾರತ್ ಸ್ವಾಭಿಮಾನ್ ಪತಂಜಲಿ ಯೋಗ ಸಮಿತಿ ಪವಿತ್ರ ಎಂ.ಸಿ., ಅಣುವ್ರತ್ ಸಮಿತಿಯ ಮಂಜು ಬನ್ಸಾಲಿ, ಜ್ಞಾನರಶ್ಮಿ ಶಾಲೆ, ಎಂ.ಇ.ಎಸ್ ಶಾಲೆಯ ಮಕ್ಕಳು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಡಾ.ಶಶಿಕಲಾ, ಡಾ.ಸೀಮಾ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ ಎಸ್. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್, ಎನ್.ಎಸ್.ಎಸ್. ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮತ್ತು ವಿವಿಧ ಯೋಗ ಸಂಸ್ಥೆಗಳ ವತಿಯಿಂದ ಜೂನ್ ೨೧ ರಂದು ಬೆಳಿಗ್ಗೆ ೬ ಗಂಟೆಗೆ ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರು ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮತ್ತು ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷೆ ಡಾ.ಆರತಿಕೃಷ್ಣ ಉಪಸ್ಥಿತರಿರಲಿದ್ದಾರೆ, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಶಾಸಕರಾದ ಜಿ.ಹೆಚ್.ಶ್ರೀನಿವಾಸ್, ಕೆ.ಎಸ್.ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಭದ್ರ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಬಿ.ಸಿ.ಸುಜಾತ ಶಿವಕುಮಾರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Walking rally on the occasion of Yoga Day
Leave a comment