Home namma chikmagalur ಇಎಸ್ಐ ಆಸ್ಪತ್ರೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲು ಸೂಚನೆ
namma chikmagalurchikamagalurHomeLatest News

ಇಎಸ್ಐ ಆಸ್ಪತ್ರೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲು ಸೂಚನೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆಗಳ ನೋಂದಾವಣೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಜಿಲ್ಲೆಯಲ್ಲಿರುವ ಪ್ರಮುಖ ಆಸ್ಪತ್ರೆಗಳನ್ನು ಇಎಸ್ಐಗೆ ಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ, ಇಎಸ್ಐ, ಆರೋಗ್ಯ, ಕಾರ್ಮಿಕ, ಪಿಎಂ ವಿಶ್ವಕರ್ಮ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೊಪ್ಪದ ಒಂದು ಆಸ್ಪತ್ರೆ ಹೊರತುಪಡಿಸಿ ಬೇರೆ ಯಾವುದೇ ಆಸ್ಪತ್ರೆಗಳು ಇಎಸ್ ಐ ಯೋಜನೆಯಡಿ ನೋಂದಣಿಯಾಗಿಲ್ಲ. ಹೀಗಾಗಿ ಇಎಸ್ಐ ಯೋಜನೆಯಡಿ ಹೆಚ್ಚಿನ ಆಸ್ಪತ್ರೆಗಳನ್ನು ಜೋಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯ ಯಾವ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಅಡಿ ಸೌಲಭ್ಯ ಸಿಗುತ್ತಿದೆಯೋ ಆ ಎಲ್ಲಾ ಆಸ್ಪತ್ರೆಗಳನ್ನು ಇಎಸ್ಐ ಜೊತೆ ಜೋಡಿಸಬೇಕು. ಇದಲ್ಲದೆ ಚಿಕ್ಕಮಗಳೂರಿನ ಬಹುತೇಕ ಪ್ರಮುಖ ಆಸ್ಪತ್ರೆಗಳನ್ನು ಇಎಸ್ಐ ಜೊತೆ ಜೋಡಿಸಿದಾಗ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.

ಪಿ ಎಮ್ ವಿಶ್ವಕರ್ಮ ಯೋಜನೆ ಅಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೂ 15 ಕೋಟಿಗೂ ಹೆಚ್ಚು ಸಾಲ ಸೌಲಭ್ಯ ನೀಡಲಾಗಿದೆ. ಇದಲ್ಲದೆ 1000ಕ್ಕೂ ಹೆಚ್ಚು ಕಿಟ್ ವಿತರಣೆ ಮಾಡಿ ಉತ್ತೇಜನ ನೀಡಲಾಗಿದೆ. ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ನೇರವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ದೀಪಕ್ ದೊಡ್ಡಯ್ಯ ಮತ್ತಿತರರಿದ್ದರು.

Instructions to give more priority to ESI hospitals

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...