ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿ ೪೦ ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಕೊಪ್ಪ ತಾಲ್ಲೂಕಿನ ಹೆಗ್ಗಾರು ಕೂಡಿಗೆ ಬಳಿ ನಡೆದಿದೆ.
ಮಂಗಳೂರಿಗೆ ಕಾಫಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತಕ್ಕೊಳಗಾಗಿದ್ದು, ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಣ್ಣಪುಟ್ಟ ಗಾಯಗೊಂಡಿದ್ದ ಈ ಇಬ್ಬರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಾರಿ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಲಾರಿಯಲ್ಲಿದ್ದ ಕಾಫಿ ಚೀಲಗಳು ಚಲ್ಲಾಪಿಲ್ಲಿಯಾಗಿವೆ.
ಅಪಘಾತ ಸಂಭವಿಸಿದ ತಕ್ಷಣವೇ ಜಯಪುರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಮಲೆನಾಡಿನಲ್ಲಿ ಸುರಿಯುತ್ತಿರುವ ಅತೀ ಹೆಚ್ಚು ಮಳೆಗೆ ಪ್ರತಿನಿತ್ಯ ಅಪಘಾತ ಪ್ರಕರಣಗಳು ಸಂಭವಿಸುತ್ತಲಿವೆ. ಚಾಲಕರು ಎಚ್ಚರಿಕೆಯಿಂದ ಜಾಗರೂಕರಾಗಿ ವಾಹನ ಚಾಲನೆ ಮಾಡುವುದು ಅಗತ್ಯವಾಗಿದೆ.
Lorry falls into 40-foot ditch near Heggaru Kudige
Leave a comment