ಚಿಕ್ಕಮಗಳೂರು: ಮಳೆಗಾಲದಲ್ಲಿ ಅನಾಹುತಗಳನ್ನು ತಡೆಗಟ್ಟಿ ಮಜಾಗ್ರತಾ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡಗನ್ನು ಸಚಿಸಲಾಗಿದ ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಮಳೆಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಳೆ ಸೇರಿದಂತೆ ಪ್ರಕೃತಿ ವಿಕೋಪಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು.
ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಅವಧಿಗೂ ಮುನ್ನ ಮಳೆ ಆರಂಭವಾಗಿದ್ದು, ಮಳೆ ಹಾಗೂ ಗಾಳಿಗೆ ಹಲವೆಡೆ ಅನಾಹುತ ಸಂಭವಿಸಿದೆ. ಗಾಳಿ ಮಳೆಗೆ ಜಿಲ್ಲೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದರು.
ವಾಡಿಕೆಯ ಪ್ರಕಾರ ಜೂನ್ 5 ರಂದು ಮಳೆ ಆರಂಭವಾಗಬೇಕಾಗಿತ್ತು. ಆದರೆ, ಮೇ ತಿಂಗಳ ಮೊದಲ ವಾರದಿಂದಲೇ ಮಳೆ ಆರಂಭವಾಗಿದೆ. ಮಳೆ ಬಂದಿದ್ದರಿಂದ ಎಲ್ಲರಿಗೂ ಒಳ್ಳೆಯದಾಗಿದೆ. ಜತೆಗೆ ಅನಾಹುತವೂ ಸಂಭವಿಸಿದೆ. ಭಾರೀ ಮಳೆ ಆಗುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡ ವಿಶೇಷ ತಂಡಗಳನ್ನು ರಚನೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ತಾವು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಈ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲಾಗಿದೆ. ಅತಿವೃಷ್ಠಿ ಎದುರಿಸಲು ಸಿಬ್ಬಂದಿಗಳ ಜತೆಗೆ ಬೇಕಾದ ಸಲಕರಣೆಗಳನ್ನು ಇಟ್ಟುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಓ ಉಸ್ತುವಾರಿ ನೋಡಿಕೊಲ್ಳುತ್ತಿದ್ದಾರೆ ಎಂದರು.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದೆಂಬ ಉದ್ದೇಶದಿಂದ ಲೈನ್‌ಮೆನ್‌ಗಳ ಜತೆಗೆ 110 ಮಂದಿ ಗ್ಯಾಂಗ್ ಮೆನ್‌ಗಳನ್ನು ಕೊಡಲಾಗಿದೆ. ಅವರಿಗೆ ಅಗತ್ಯ ವಾಹನಗಳನ್ನು ಸಹ ನೀಡಲಾಗಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ್ನು ನೇಮಿಸಿಕೊಳ್ಳಲಾಗಿದ್ದು, ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ ಎಂದರು.
ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಕೆಲವೆಡೆ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಯವರು ಅನುಮತಿ ನೀಡುತ್ತಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದರು. ಹೀಗಾಗಿ ಕೆಲವು ಸಂದರ್ಭದಲ್ಲಿ ನಿಯಮಗಳನ್ನು ಸರಳಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರು, ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದಕೆಲಸ ಮಾಡಬೇಕು ಎಂದು ಸೂಚಿಸಿದರು.
District administration prepared to prevent natural disasters
Leave a comment