Home Latest News ಪೊಲೀಸರು ವಿವೇಚನೆ ಇಟ್ಟುಕೊಂಡು ಕೆಲಸ ಮಾಡಬೇಕು
Latest NewschikamagalurHomenamma chikmagalur

ಪೊಲೀಸರು ವಿವೇಚನೆ ಇಟ್ಟುಕೊಂಡು ಕೆಲಸ ಮಾಡಬೇಕು

Share
Share

ಚಿಕ್ಕಮಗಳೂರು : ಪೊಲೀಸರು ವಿವೇಚನೆ ಇಟ್ಟುಕೊಂಡು ಕೆಲಸ ಮಾಡಬೇಕು, ಮಾನವ ಹಕ್ಕುಗಳನ್ನು ದಮನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ತಿಳಿಸಿದ್ದಾರೆ.

ಚಿಕ್ಕಮಂಗಳೂರಿನಲ್ಲಿ ಇಂದು ಚಕ್ರವರ್ತಿ ಸೂಲುಬೆಲೆ ಕಾರ್ಯಕ್ರಮಕ್ಕೆ ಪೊಲೀಸರ ನೋಟೀಸ್ ಹಿನ್ನೆಲೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ವಿವೇಚನೆ ಇಡ್ಕೊಂಡು ಕೆಲಸ ಮಾಡಬೇಕು, ಮಾನವ ಹಕ್ಕುಗಳನ್ನು ದಮನ ಮಾಡಲು ಆಗುವುದಿಲ್ಲ. ಯಾರೋ ಹೇಳುತ್ತಾರೆ ಎಂದು ಕುಣಿದರೆ, ಅವರೇ ಹೊಣೆ ಹೊತ್ತುಕೊಳ್ಳಬೇಕಾಗುತ್ತೆ. ಇಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆಯಾ? ರಾಜಕೀಯ ನಾಯಕನ ಟೀಕೆ ಮಾಡಬಾರದು, ಇವರು ಯಾರು ಹೇಳೋದಕ್ಕೆ, ಬರೆದು ಕೊಟ್ಟು ಹೋಗಬೇಕಾ? ಇವರು ಹೇಳಿದಂತೆ ಮಾತನಾಡಬೇಕಾ ಎಂದು ಪ್ರಶ್ನಿಸಿದರು.

ಚಕ್ರವರ್ತಿ ಸೂಲಿಬೆಲೆ ಒಬ್ಬ ರಾಷ್ಟ್ರವಾದಿ ಚಿಂತಕರು, ನಕ್ಸಲ್ ವಾದಿಗಳ ಪಕ್ಕದಲ್ಲಿ ಕೂರಿಸಿಕೊಂಡು ಮೀಟಿಂಗ್ ಮಾಡಲು ಬರುತ್ತದೆ. ದೇಶದ್ರೋಹಿ ಚಟುವಟಿಕೆ ಮಾಡುವರ ಬೆಂಬಲ ಪಡೆದು ವೋಟ್‌ ಬ್ಯಾಂಕ್ ಮಾಡಿಕೊಳ್ಳಲು ಬರುತ್ತದೆ. ರಾಷ್ಟ್ರವಾದಿಯಾ ಭಾಷಣಕ್ಕೆ ನಿರ್ಬಂಧ ಹೇರುತ್ತಾರೆ, ಇದನ್ನೆಲ್ಲಾ ಸಹಿಸಲು ಆಗುತ್ತಾ? 12 ಗಂಟೆಗೆ ಬಂದು ಬಾಗಿಲು ಬಡಿದರೆ ಯಾರು ಸಹಿಸಿಕೊಳ್ಳುತ್ತಾರೆ? ಕಾನೂನಿನ ಮೇಲೆ ನಂಬಿಕೆ ಇಟ್ಟಿರುವ ಜನರಾದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದೆಲ್ಲಾ ಬಹಳ ದಿನ ನಡೆಯಲ್ಲ, ತುರ್ತು ಪರಿಸ್ಥಿತಿಗೆ ಐವತ್ತು ವರ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಅಘೋಷಿತ ತುರ್ತು ಪರಿಸ್ಥಿತಿ ಹೇರಿ ಮಾಡಬಾರದ್ದೆಲ್ಲಾ ಮಾಡಿದರೆ ಆಗಲ್ಲ. ಕಾಂಗ್ರೆಸ್ ಅನ್ನು ಜನ ದೇಶಾದ್ಯಂತ ಬೇರು ಸಹಿತ ಕಿತ್ತುಹಾಕೋ ಕೆಲಸ ಮಾಡಿದರು. ನೀವು ಮಾಡಬಾರದನ್ನೆಲ್ಲಾ ಮಾಡಲು ಹೋದರೆ ನಿಮಗೂ ಅದೇ ಗತಿ ಎಂದರು.

Police should work with discretion.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....