ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ. ಊಟಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬ ಎದೆನೋವೆಂದು ಹೇಳುತ್ತಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರದ ಸತ್ಯಮಂಗಲ ಬಡಾವಣೆಯ 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು. ಕಿಕ್ಕೇರಿ ಮೂಲದ ಚೇತನ್ ಹಾಸನದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
A young man suffered a heart attack while sitting for lunch in Hassan.
Leave a comment