ಚಿಕ್ಕಮಗಳೂರು: ಭ್ರಷ್ಟ ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯೇ ದಾಳಿ ನಡೆಸಿದ್ದಾರೆ.
ನಗರಸಭೆಯ ಲೆಕ್ಕಾಧಿಕಾರಿ ಲತಾಮಣಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ಎರಡು ತಂಡಗಳು ನಗರದ ಜಯನಗರ ಬಡಾವಣೆಯಲ್ಲಿರುವ ಲತಾಮಣಿ ಅವರ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಲತಾಮಣಿ ಪತಿ ಚಂದ್ರಶೇಖರ್ ನಿರ್ಮಿತಿ ಕೇಂದ್ರದಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ದಾಳಿ ಸಂದರ್ಭದಲ್ಲಿ ಆಸ್ತಿ, ದಾಖಲೆಗಳು ಹಾಗೂ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Lokayukta raids the house of Municipal Accountant Lathamani
Leave a comment