Home namma chikmagalur ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 
namma chikmagalurchikamagalurHomeLatest News

ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 

Share
Share

ಚಿಕ್ಕಮಗಳೂರು:  ಸಮಾಜಸೇವೆ ಮತ್ತು ಕನ್ನಡ ನಾಡು-ನುಡಿ, ನೆಲ-ಜಲ ರಕ್ಷಣೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆಯನ್ನು ಹೊಸದಾಗಿ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ರಾಜ್ ಪ್ರಶಾಂತ್ ತಿಳಿಸಿದರು.
ಅವರು ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆಯ ಜಿಲ್ಲಾ ಘಟಕವನ್ನು ಚಿಕ್ಕಮಗಳೂರಿನಲ್ಲಿ ಮೇ.೨೩ ರಂದು ಸ್ಥಾಪಿಸಲಾಗಿದ್ದು, ರಾಜ್ಯದ ೩೧ ಜಿಲ್ಲೆಗಳಲ್ಲಿ ಮತ್ತು ೨೪೪ ತಾಲ್ಲೂಕುಗಳಲ್ಲಿ ಘಟಕಗಳನ್ನು ಆರಂಭಿಸಲು ಗುರಿಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಘಟಕವನ್ನು ಪದಾಧಿಕಾರಿಗಳ ಆಯ್ಕೆಯ ನಂತರ ಶೀಘ್ರದಲ್ಲೇ ಉದ್ಘಾಟಿಸಲು ನಿರ್ಧರಿಸಿದ್ದೇವೆ, ಈಗಾಗಲೇ ಹಾಸನ, ಬೇಲೂರು, ಶಿವಮೊಗ್ಗ ಮುಂತಾದೆಡೆ ರಕ್ಷಣಾ ವೇದಿಕೆಯನ್ನು ಸ್ಥಾಪಿಸಿದ್ದೇವೆ ಎಂದರು.

ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು, ಧಕ್ಷೆ ಉಂಟಾದಲ್ಲಿ ಹೋರಾಟ ಮಾಡುವುದು, ಬಡವರು ಮತ್ತು ಶೋಷಿತರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ಜೊತೆಗೆ ಅವರ ಏಳಿಗೆಗೆ ಶ್ರಮಿಸುವುದು, ಪರಿಸರ ಸಂರಕ್ಷಣೆ, ಜನತೆಯ ಹಕ್ಕು ಮತ್ತು ಸ್ವಾತಂತ್ರ್ಯ ರಕ್ಷಣೆ, ರೈತರ ಹಾಗೂ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮೀಣ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು, ಪ್ರಮುಖ ರಾಷ್ಟ್ರೀಯ ಹಬ್ಬಗಳ ಆಚರಣೆ ಹಮ್ಮಿಕೊಳ್ಳಲಾಗುವುದು, ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕ್ರೀಡಾಕೂಟಗಳನ್ನು ಏರ್ಪಡಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಅತೀ ಶೀಘ್ರದಲ್ಲಿ ವೇದಿಕೆಯನ್ನು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ನಗರ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಅವುಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು, ಸದಸ್ಯರನ್ನು ನೇಮಿಸುವ ಉದ್ದೇಶವನ್ನು ಹೊಂದಿದ್ದು, ಆಸಕ್ತಿ ಉಳ್ಳವರು ತಮ್ಮ ಮೊಬೈಲ್ ಸಂಖ್ಯೆ-೯೦೧೯೯೫೧೮೩೭ ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಉಪಾಧ್ಯಕ್ಷ ಲಕ್ಷ್ಮಣ್, ನಿರ್ದೇಶಕರುಗಳಾದ ಬಿ.ಬಿ. ಹಾಲಪ್ಪ, ಚಂದ್ರು, ಕುಮಾರ್ ಉಪಸ್ಥಿತರಿದ್ದರು.

New protection platform to be established to protect land language soil and water

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...