Home ನಗರದಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ
HomechikamagalurCrime NewsLatest Newsnamma chikmagalur

ನಗರದಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ

Share
Share

ಚಿಕ್ಕಮಗಳೂರು: : ಕಾಫಿನಾಡಿನಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್‌ವೊಂದು ಭೀತಿ ಹುಟ್ಟಿಸಿದ್ದು, ನಗರದಲ್ಲಿ ಆಯುಧಗಳ ಸಮೇತ ೬ ಮಂದಿ ಕಳ್ಳರ ತಂಡ ಓಡಾಟ ನಡೆಸಿರುವುದು ಬೆಳಕಿಗೆ ಬಂದಿದೆ.

ಮಧ್ಯರಾತ್ರಿ ೨ ಗಂಟೆಯಿಂದ ೩.೩೦ರ ನಡುವೆ ಬೈಪಾಸ್ ರಸ್ತೆ ದಂಟರಮಕ್ಕಿ ಹಾಗೂ ಸುತ್ತಮುತ್ತಲಿನ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರ ಗ್ಯಾಂಗ್ ರಾಮಕೃಷ್ಣ ಕಾಲೇಜು ಸಮೀಪದ ಮನೆಯೊಂದರಲ್ಲಿ ದರೋಡೆಗೆ ಯತ್ನಿಸಿದೆ.

ಕಳ್ಳರು ಮನೆಗಳಿಗೆ ಟಾರ್ಚ್ ಹಾಕಿ ನೋಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮುಸುಕುಧಾರಿ ಕಳ್ಳರ ಓಡಾಟದ ದೃಶ್ಯಗಳು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದು, ನಗರ ನಿವಾಸಿಗಳು ಆತಂಕದಲ್ಲಿದ್ದಾರೆ.

ಸದ್ಯ ಜನರಲ್ಲಿ ಆತಂಕ ಸೃಷ್ಟಿಸಿರುವ ಮುಸುಕುಧಾರಿ ಕಳ್ಳರ ಗ್ಯಾಂಗ್‌ನ್ನು ಹೆಡೆಮುರಿ ಕಟ್ಟುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Gang of masked thieves roams the city

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...